September 6, 2026
Mumbai News Kannada
ಸುದ್ದಿ

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ





ತಮಿಳುನಾಡಿನ ಕರೂರ್‌ನಲ್ಲಿ ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿಜಯ್ ತಡವಾಗಿ ಬಂದಿದ್ದರಿಂದ ಮತ್ತು ವಿಪರೀತ ಜನಸಂದಣಿಯಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ತಮಿಳುನಾಡು ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಅವರು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದು, ಮೃತರರಲ್ಲಿ 6 ಮಕ್ಕಳು, 9 ಪುರುಷರು ಮತ್ತು 16 ಮಹಿಳೆಯರು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ವಿಜಯ್ ಅವರ ರಾಜ್ಯಾದ್ಯಂತ ಪ್ರವಾಸದ ಭಾಗವಾಗಿ ಈ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸುಮಾರು 30,000ಕ್ಕೂ ಹೆಚ್ಚು ಜನರು ಕರೂರ್‌ನಲ್ಲಿ ಸೇರಿದ್ದರು. ಆದರೆ, ವಿಜಯ್ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದರಿಂದ, ವಿಪರೀತ ಬಿಸಿಲು ಮತ್ತು ಜನಸಂದಣಿಯ ಕಾರಣದಿಂದಾಗಿ ಹಲವರು ಮೊದಲೇ ಅಸ್ವಸ್ಥಗೊಂಡು ಮೂರ್ಛೆ ಹೋಗಿದ್ದರು.

ಪರಿಸ್ಥಿತಿ ಕೈಮೀರುತ್ತಿದ್ದಂತೆ, ವಿಜಯ್ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ, ನೆರವಿಗೆ ಧಾವಿಸುವಂತೆ ಪೊಲೀಸರಲ್ಲಿ ಮನವಿ ಮಾಡಿದರು. ವೇದಿಕೆಯಿಂದಲೇ ಜನರಿಗೆ ನೀರಿನ ಬಾಟಲಿಗಳನ್ನು ಎಸೆದು ಸಹಾಯ ಮಾಡಲು ಪ್ರಯತ್ನಿಸಿದರು. ಆದರೆ, ಇದೇ ವೇಳೆ ಕಾಲ್ತುಳಿತ ಸಂಭವಿಸಿದ್ದು, ನೂಕುನುಗ್ಗಲಿನಲ್ಲಿ ಸಿಲುಕಿ ಹಲವರು ಪ್ರಾಣ ಕಳೆದುಕೊಂಡರು. ಬೃಹತ್ ಜನಸ್ತೋಮದ ಕಾರಣ ಆಂಬುಲೆನ್ಸ್‌ಗಳು ಸಹ ಸ್ಥಳಕ್ಕೆ ತಲುಪಲು ಪರದಾಡುವಂತಾಯಿತು.

10 ಸಾವಿರ ಮಂದಿ ಸೇರುವ ನಿರೀಕ್ಷೆ ಇತ್ತು. ಹೀಗಾಗಿ ಪೊಲೀಸರಿಗೆ ಭದ್ರತೆ ನೀಡುವಂತೆ ವಿಜಯ್ ಕೇಳಿಕೊಂಡಿದ್ದರು. ಆದರೆ ಅಂದಾಜಿನ ಪ್ರಕಾರ ಸುಮಾರು 30,000 ಜನರು ರ‍್ಯಾಲಿಗೆ ಸೇರಿದ್ದು ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಇನ್ನು ಡಿಎಂಕೆ ಪಕ್ಷ ಈ ಕಾಲ್ತುಳಿತಕ್ಕೆ ವಿಜಯ್ ಅವರ ನಿರ್ಲಕ್ಷ್ಯಕ್ಕೆ ಕಾರಣ ಎಂದು ದೂಷಿಸಿದ್ದು, ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಬೆಂಗಳೂರು : ರಾಜ್ಯಪಾಲರಿಂದ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ: ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮನ್ನಣೆ

Mumbai News Desk

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ವಾರ್ಷಿಕ ಪ್ರಶಸ್ತಿಗಳ ಪ್ರಕಟ

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk