September 6, 2026
Mumbai News Kannada
ಸುದ್ದಿ

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ





ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಬಾರಿ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.
ಈ ಸಂದರ್ಭ ಕೇಂದ್ರ ನಾಗರೀಕ ವಾಯುಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರುಳಿಧರ್ ಮೋಹೋಲ್, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.


ಇದು ಭಾರತದ ಅತಿದೊಡ್ಡ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ, ಮತ್ತು ಮುಂಬೈ ಮೆಟ್ರೋ ಪಾಲಿಟಿನ್ ಪ್ರದೇಶದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.
ಇದೇ ವೇಳೆ ಪ್ರಧಾನಿ ಮೋದಿ ಅವರು ಆತ್ರೆ ಚೌಕ್ ನಿಂದ ಕಫೆ ಫಾರೆಡ್ ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ 4ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ವೆಚ್ಚದಲ್ಲಿ ನಿರ್ಮಸ್ಸಲಾಗಿದೆ.
ಸಾರ್ವಜನಿಕ ಸಾರಿಗೆ ನಿರ್ವಾಹಕರಲ್ಲಿ ಸಂಯೋಜಿತ ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಹಲವಾರು ಪ್ರಯೋಜನಗಳನ್ನು ನೀಡುವ ಮುಂಬೈ ಒನ್ ಅಪ್ಲಿಕೇಶನ್ ಅನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.



Related posts

ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ AI -171 (Air India)ವಿಮಾನ ಪತನ, ಹಲವರ ಸಾವು ಶಂಕೆ

Mumbai News Desk

ಮಂಗಳೂರು ದಸರಾಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಆಹ್ವಾನ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಕರಾವಳಿಯ ಬಹುಮುಖ ಪ್ರತಿಭೆಯ ಸಂಘಟಕ, ಹೋರಾಟಗಾರ, ಮೀನುಗಾರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk