31 C
Mumbai
October 8, 2026
Mumbai News Kannada
ಸುದ್ದಿ

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ



ನಾರ್ವೇಜಿಯನ್ ನೊಬೆಲ್ ಸಮಿತಿಯು ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದೆ. ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕೊಡಿಸುವ ಸಲುವಾಗಿ ಅವರ ದಣಿವರಿಯದ ಕೆಲಸ ಮತ್ತು ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಅವರ ಹೋರಾಟಕ್ಕಾಗಿ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಮಚಾಡೊ ಅವರು 20 ವರ್ಷಗಳ ಹಿಂದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗಾಗಿ ಧ್ವನಿಯೆತ್ತಿದರು. ಅಂದಿನಿಂದ ಅವರು ಜನರ ಪರವಾಗಿ ನಿಂತಿದ್ದಾರೆ..
ಟ್ರಂಪ್ ಗೆ ಮುಖಭಂಗ
ಟ್ರಂಪ್ ಹಲವಾರು ಸಂದರ್ಭಗಳಲ್ಲಿ ಸ್ವತಃ ತಾವೇ ತಮಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಘೋಷಿಸಿಕೊಂಡಿದ್ದರು. ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಹಲವು ಜಾಗತಿಕ ಸಂಘರ್ಷಗಳನ್ನು ಪರಿಹರಿಸುವಲ್ಲಿ ನಾನು ಮುಖ್ಯ ಪಾತ್ರ ವಹಿಸಿದ್ದೇನೆ ಎಂದು ಅವರು ಹೇಳಿದ್ದರು. ಇಸ್ರೇಲ್, ಥೈಲ್ಯಾಂಡ್, ಕಾಂಬೋಡಿಯಾ, ಅಜೆರ್ಬೈಜಾನ್, ಅರ್ಮೇನಿಯಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವಾರು ರಾಷ್ಟ್ರಗಳು 2025ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಟ್ರಂಪ್ ಅವರನ್ನು ಬೆಂಬಲಿಸಿದ್ದವು.

“ಕೇವಲ 7 ತಿಂಗಳಲ್ಲಿ, ನಾನು 7 ಅಂತ್ಯವಿಲ್ಲದ ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಇಲ್ಲದಿದ್ದರೆ ಇನ್ನಷ್ಟು ಪ್ರಾಣಗಳು ಬಲಿಯಾಗುತ್ತಿದ್ದವು. ಹೀಗಾಗಿ, ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು” ಎಂದು ಟ್ರಂಪ್ ಈ ಹಿಂದೆ ಹೇಳಿದ್ದರು.ಇದೀಗ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಡೊನಾಲ್ಡ್ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ.



Related posts

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk