September 6, 2026
Mumbai News Kannada
ಸುದ್ದಿ

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ





ಖ್ಯಾತ ತೆಂಕುತಿಟ್ಟು ಯಕ್ಷಗಾನ ಭಾಗವತ,
ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ(65) ಅವರು ಅಕ್ಟೋಬರ್ 16 ರ ಗುರುವಾರದಂದು ಅರಸಿನಮಕ್ಕಿಯ ಅವರ ನಿವಾಸದಲ್ಲಿ ನಿಧನರಾದರು.

ತೆಂಕುತಿಟ್ಟು ಶೈಲಿಯ ಯಕ್ಷಗಾನ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಅಗಲಿದ್ದು, ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ​ಕರಾವಳಿಯ ಯಕ್ಷರಂಗದಲ್ಲಿ ತಮ್ಮ ಕಂಚಿನ ಕಂಠ ಮತ್ತು ವಿಶಿಷ್ಟ ರಾಗ ಸಂಯೋಜನೆಯಿಂದ ‘ರಸರಾಗ ಚಕ್ರವರ್ತಿ’ ಎಂದೇ ಖ್ಯಾತಿ ಪಡೆದಿದ್ದರು.

ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ-ಮದ್ದಳೆ ವಾದಕರಾಗಿ ಆರಂಭಿಸಿದ,ನಂತರ ಭಾಗವತರಾಗಿ ಬೆಳೆದು ಕರಾವಳಿಯಾದ್ಯಂತ ಮನೆಮಾತಾದ ಕಲಾವಿದರ
ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು.
ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು, ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿದ್ದು ವಿಶೇಷ. ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ ಅವರು, ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರಮಾನ್ಯ ಸ್ಥಾನಕ್ಕೇರಿದ್ದರು.

ಅಮ್ಮಣ್ಣಾಯರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಅಲ್ಲದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿ ಅಪಾರ ಜನಮನ್ನಣೆ ಗಳಿಸಿದವರು. ಅದರಲ್ಲೂ ‘ಕಾಡಮಲ್ಲಿಗೆ’, ‘ಕಚ್ಚೂರ ಮಾಲ್ದಿ’, ‘ಪಟ್ಟದ ಪದ್ಮಲೆ’ ಹಾಗೂ ‘ಮಾನಿಷಾದ’ ದಂತಹ ಪ್ರಸಂಗಗಳನ್ನು ತಮ್ಮ ಗಾಯನದಿಂದ ಜನಪ್ರಿಯಗೊಳಿಸಿದ ಕೀರ್ತಿ ಅವರದ್ದಾಗಿತ್ತು. ಅಲ್ಲದೆ, ‘ಸತ್ಯಹರಿಶ್ಚಂದ್ರ’ ಪ್ರಸಂಗದ ಹಾಡುಗಳಿಗೆ ಅಭಿಮಾನಿಗಳು ಸಹಸ್ರಾರು.

ಅವರ ಅನುಪಮ ಕಲಾ ಸೇವೆಗೆ ಉಡುಪಿ ತುಳುಕೂಟವು ಪ್ರತಿಷ್ಠಿತ ‘ಸಾಮಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಮಲ್ಪೆ ರಾಮದಾಸ ಸಾಮಗ, ಅಳಿಕೆ ರಾಮಯ್ಯ ರೈ, ಕೋಳೂರು ರಾಮಚಂದ್ರ ರಾವ್ ಅವರಂತಹ ಮೇರು ಕಲಾವಿದರ ಒಡನಾಟದಲ್ಲಿ ತಮ್ಮ ಕಲಾ ಅನುಭವವನ್ನು ಶ್ರೀಮಂತಗೊಳಿಸಿಕೊಂಡ ಅಮ್ಮಣ್ಣಾಯರು, ಇತ್ತೀಚೆಗೆ ಎಡನೀರು ಮೇಳದಲ್ಲಿ ತಿರುಗಾಟ ಪೂರ್ಣಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹವ್ಯಾಸಿ ಭಾಗವತರಾಗಿಯೂ ತಮ್ಮ ಕಲಾ ಸೇವೆಯನ್ನು ಮುಂದುವರೆಸಿದ್ದರು.



Related posts

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk

ಚೀನಾದ  ಮಿಲಿಯನ್ ಡಾಲರ್ ರೌಂಡ್ ಟೇಬಲ್ ಅಧೀವೇಶನಕ್ಕೆ ಸ್ಪೀಕ‌ರ್ ಆಗಿ   ಡಾ| ಆರ್.ಕೆ ಶೆಟ್ಟಿ ಆಯ್ಕೆ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನೆ

Mumbai News Desk

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk