ದಿನಾಂಕ 29.10.2025 ರಂದು (ಬುಧವಾರ) ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಧೃತಿ ರವಿ ಕುಮಾರ್ ಅವರು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀ ಸುಕುಮಾರ್ ಶ್ರೀಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್ ಹಾಗೂ ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಶುಭ ಕೋರಿದ್ದಾರೆ




