September 6, 2026
Mumbai News Kannada
ಸುದ್ದಿ

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ





ಸುರತ್ಕಲ್: ರಂಗ ಚಾವಡಿ ಮಂಗಳೂರು ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್ (ರಿ), ಸುರತ್ಕಲ್, ಇವರ ಸಹಯೋಗದಲ್ಲಿ ‘ರಂಗು ರಂಗಿನ ರಂಗೋತ್ಸವ – ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮವನ್ನು ನವೆಂಬರ್ 9, ಭಾನುವಾರ, ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಆಯೋಜಿಸಲಾಗಿದೆ.

​ಸಮಾರಂಭದಲ್ಲಿ, ಖ್ಯಾತ ಕಲಾವಿದ ಕುಸೇಲ್ದರಸೆ ನವೀನ್ ಡಿ. ಪಡೀಲ್ ಅವರನ್ನು 2025ರ ಸಾಲಿನ ರಂಗಚಾವಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

​ಸಮಾರಂಭದ ಅತಿಥಿಗಳಾಗಿ ವಿ. ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಶ್ರೀ ಡೆವಲಪರ್ಸ್‌ ಕಟೀಲ್‌ನ ಆಡಳಿತ ನಿರ್ದೇಶಕ ಗಿರೀಶ್ ಎಂ. ಶೆಟ್ಟಿ ಕಟೀಲು ಭಾಗವಹಿಸಲಿದ್ದಾರೆ.

​ಇವರೊಂದಿಗೆ, ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಸಾಯಿ ಪ್ರೀಥ್ವಿ ಕಾರ್ಪೋರೇಶನ್‌ನ ಆಡಳಿತ ನಿರ್ದೇಶಕ ಭವಾನಿ ಶಂಕರ್ ಡಿ. ಶೆಟ್ಟಿ, ಚಲನಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಲಂಚುಲಾಲ್ ಕೆ. ಎಸ್., ಚಿತ್ರನಟ ಶೋಧನ್ ಶೆಟ್ಟಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ನಿಯಮಿತದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಯಥಾರ್ಥ್ ಸೋಶಿಯಲ್‌ನ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ ಹಾಗೂ ಸುಭಾಷಿತನಗರ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್‌ನ ಅಧ್ಯಕ್ಷ ರಮೇಶ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

​ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಪ್ರಶಸ್ತಿ ಪ್ರದಾನದ ಬಳಿಕ ರವೀಂದ್ರ ಪ್ರಭು ತಂಡದಿಂದ “ರಾಗ್ ರಂಗ್” ಸಂಗೀತ ರಸಮಂಜರಿ, ಅರವಿಂದ ಬೋಳಾರ್ ಮತ್ತು ಉಮೇಶ್ ಮಿಜಾರ್ ಅವರಿಂದ “ಕಲಿವಲಿ ಕಾಮಿಡಿ” ಹಾಗೂ ಪುಷ್ಪರಾಜ್ ಬೊಳ್ಳಾರ್, ರವಿರಾಮಕುಂಜ ಮತ್ತು ರಾಘವೇಂದ್ರ ರೈ ತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದು ರಂಗಚಾವಡಿ ಸಂಸ್ಥೆಯ ಸಂಸ್ಥಾಪಕ, ಪತ್ರಕರ್ತ ಜಗನ್ನಾಥ್ ಶೆಟ್ಟಿ ಬಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk