32 C
Mumbai
March 7, 2026
Mumbai News Kannada
ಸುದ್ದಿ

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ





ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ

ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಜಿಲ್ಲಾಡಳಿತಕ್ಕೆ ನಾವು ನಮ್ಮ ಪ್ರಸ್ತಾವನೆ ನೀಡಿದ್ದೇವೆ. ಸರ್ಕಾರದ ನಿರ್ಧಾರವನ್ನು ಅಡ್ವೊಕೆಟ್ ಜನರಲ್ ತಿಳಿಸಬೇಕು ಎಂದು ಹೇಳಿದ್ದರು. ಜಿಲ್ಲಾಡಳಿತ ಪರವಾಗಿ ವಾದ ಮಾಡಿದ್ದ ಅಡ್ವೊಕೆಟ್ ಜನರಲ್ ಶಶಿಕರಣ್​ ಶೆಟ್ಟಿ, ಪಥಸಂಚನಲಕ್ಕಾಗಿ 11 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕ ದಿನ ಅವಕಾಶ ನೀಡಲು ಚಿಂತಿಸಲಾಗಿದೆ. ಇದಕ್ಕಾಗಿಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಾಲಕ್ಕೆ ಮನವಿ ಮಾಡಿದ್ದರು. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದೇ ದಿನಾಂಕದಲ್ಲಿ ಅನುಮತಿ ನೀಡಿ ಎಂದು ಈ ವೇಳೆ ಅರ್ಜಿದಾರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಅರ್ಜಿದಾರರ ಮನವಿಯಂತೆ ನ.16ರಂದು ಪಥಸಂಸಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.



Related posts

ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ :

Mumbai News Desk

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk