32 C
Mumbai
March 7, 2026
Mumbai News Kannada
ಸುದ್ದಿ

ಬೆಂಗಳೂರು : ವೃಕ್ಷಮಾತೆ, ಶತಾಯುಷಿ, ಸಾಲುಮರದ ತಿಮ್ಮಕ್ಕ ಇನ್ನಿಲ್ಲ





ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನರಾದರು
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.



Related posts

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk