July 23, 2026
Mumbai News Kannada
ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್







ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಈ ಆದೇಶವನ್ನು ಹೊರಡಿಸಿದೆ.

ಸದ್ಯ ಪುತ್ತೂರು ಉಪವಿಭಾಗಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಗಡಿಪಾರು ಆದೇಶವನ್ನು ರದ್ದುಗೊಳಿಸಿದ ನ್ಯಾಯಪೀಠ, ಪ್ರಕರಣವನ್ನು ಮರುವಿಚಾರಣೆಗೆ ಒಳಪಡಿಸುವಂತೆ ಸೂಚಿಸಿದೆ.
ʻಪ್ರಕರಣದ ಕುರಿತು ಹೊಸದಾಗಿ ವಿಚಾರಣೆಯನ್ನು ನಡೆಸಿ, ಮುಂದಿನ 15 ದಿನಗಳೊಳಗೆ ಸೂಕ್ತವಾದ ಕಾರಣಗಳು ಮತ್ತು ಕಾನೂನಿನ ಸೆಕ್ಷನ್‌ಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೊಸ ಆದೇಶವನ್ನು ಹೊರಡಿಸಬೇಕು,ʼಎಂದು ಪೀಠವು ಪುತ್ತೂರಿನ ಉಪವಿಭಾಗಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹೈಕೋರ್ಟ್‌ನ ಈ ಆದೇಶದಿಂದಾಗಿ, ತಿಮರೋಡಿ ಅವರ ಮೇಲಿದ್ದ ಗಡೀಪಾರು ಭೀತಿ ಸದ್ಯಕ್ಕೆ ದೂರವಾಗಿದ್ದು, ಉಪವಿಭಾಗಾಧಿಕಾರಿ ನಡೆಸುವ ಹೊಸ ವಿಚಾರಣೆ ಮತ್ತು ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದೆ.



Related posts

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಕಲ್ಯಾಣ್: ಧಾರ್ಮಿಕ, ಸಾಮಾಜಿಕ ಸಂಘಟಕ, ಭಜನಾ ಗಾಯಕ ದೇವಾನಂದ್ ಜೆ ಸುವರ್ಣ ನಿಧನ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk