ಬಹಿರಂಗ ಅಧಿವೇಶನ, ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ
ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವಂಬರ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ “ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 10 ರಿಂದ 11 ರ ವರೆಗೆ ಕಾರ್ಯಕಾರಿ ಸಮಿತಿ ಸಭೆ ಮತ್ತು 29ನೇ ವಾರ್ಷಿಕ ಮಹಾಸಭೆ ಜರಗಲಿದೆ.
ಬೆಳಿಗ್ಗೆ ಗಂಟೆ 11 ರಿಂದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಬಹಿರಂಗ ಅಧಿವೇಶನ ಕಾರ್ಯಕ್ರಮ ನಡೆಯಲಿದೆ.
ಬಹಿರಂಗ ಅಧಿವೇಶನದಲ್ಲಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ವನ್ನು ಆಚರಿಸುತ್ತಿರುವ ಒಕ್ಕೂಟದ ದಾನಿಗಳಾದ ಉಮಾ ಕೃಷ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 2025ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಗೌರವ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮಹಾದಾನಿ, ದಾನಿಗಳು, ಪದಾಧಿಕಾರಿಗಳು, ವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ. ಗೌರವ ಪ್ರಧಾನ ಕಾರ್ಯದರ್ಶಿಜಯಕರ್ ಶೆಟ್ಟಿ ಇಂದ್ರಾಳಿ. ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ . ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ಮತ್ತು ದಾನಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು ವಿನಂತಿಸಿಕೊಂಡಿದ್ದಾರೆ.




