September 6, 2026
Mumbai News Kannada
ಕರ್ನಾಟಕ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ





ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ರಾಬರಿ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಟ ಮಟ ಮಧ್ಯಾಹ್ನದ ಸಮಯದಲ್ಲಿ ಎಟಿಂಎಗೆ ಹಣ ಹಾಕೋ ವಾಹನದಿಂದ ರಾಬರಿ ಮಾಡಿ ದರೋಡೆ ಕೋರರು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬಂದಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಎಂದು ಹೆದರಿಸಿದ್ದಾರೆ. ಬಳಿಕ ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ. ಡ್ರೈವರ್ ನನ್ನ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.
ಮಧ್ಯಾಹ್ನದ ಸಮಯದಲ್ಲಿ ಎಟಿಂಎ ಗೆ ಹಣ ಹಾಕೊ ವಾಹನದಿಂದ ರಾಬರಿ ಮಾಡಲಾಗಿದ್ದು, ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಯನ್ನು ದೋಚಿಕೊಂಡು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬ್ಯಾಂಕ್ ಸಿಬ್ಬಂದಿ ಹಾಗೂ ಸೆಕ್ಯುರಿಟಿ ಬಂದಿದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಅಂತ ಹೆದರಿಸಿದ್ದಾರೆ. ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ, ಆದರೆ ಡ್ರೈವರ್ ನನ್ನು ಮಾತ್ರ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಬಳಿಕ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣವನ್ನು ತಮ್ಮ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.



Related posts

ಕರ್ನಾಟಕ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದಾಖಲೆಯ ಶೇ.86 ಫಲಿತಾಂಶ : ಆಳ್ವಾಸ್ ಕಾಲೇಜ್ ನ ದಿಶಾ ರಾಜ್ಯಕ್ಕೆ ಪ್ರಥಮ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕ: ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk