32 C
Mumbai
March 7, 2026
Mumbai News Kannada
ಕರ್ನಾಟಕ

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ





ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ
ಹೇಳಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿರುವ ಅವರು ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಅವರು ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು.
ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶವನ್ನು ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದರು.

ನಾನು ಕಳೆದ 30 ವರ್ಷಗಳಿಂದ ಯಕ್ಷಗಾನವನ್ನು ಮಾಡುತ್ತಾ ಬಂದಿದ್ದೇನೆ. ಈಗಲೂ ತಾಳಮದ್ದಳೆ ಅರ್ಥವನ್ನು ಹೇಳುತ್ತಿದ್ದೇನೆ. ನನಗೆ ಯಕ್ಷಗಾನದ ಬಗ್ಗೆ ಬಹಳಷ್ಟು ಗೌರವವಿದೆ ಎಂದರು.



Related posts

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ

Mumbai News Desk

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk

ಕರ್ನಾಟಕ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk