ಒಟ್ಟಿಗೆ ಸೇರಿ ನಾವು ಕೆಲಸ ಮಾಡಿಕೊಂಡು ಹೋಗ್ತೇವೆ. ಹೈಕಮಾಂಡ್ ಏನು ಹೇಳುತ್ತೆ ಹಾಗೆ ಕೆಲಸ ಮಾಡಿಕೊಂಡು ಹೋಗ್ತೇವೆ. ಮುಂದೆ 2028ರಲ್ಲಿ ಸರಕಾರವನ್ನು ಅಧಿಕಾರಕ್ಕೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ ಬೆಳಗ್ಗಿನ ಉಪಹಾರಕ್ಕೆ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ್ದ ಡಿಕೆ ಶಿವಕುಮಾರ್, ಉಪಹಾರದ ನಂತರದ ಪತ್ರಿಕಾಗೋಷ್ಠಿಯಲ್ಲಿ ಈ ಮಾತುಗಳನ್ನು ತಿಳಿಸಿದರು.
ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ, “ಹೈಕಮಾಂಡ್ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ. ಇದನ್ನು ನಾವು ಹಿಂದೆಯೂ ಸ್ಪಷ್ಟಪಡಿಸಿದ್ದೇವೆ. ಈಗಲೇ ಇದನ್ನೇ ಹೇಳುತ್ತೇವೆ,” ಎಂದರು.
ಮುಂದಿನ ಎರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಊಟಕ್ಕೆ ನಮ್ಮ ಮನೆಗೆ ಬರಲಿದ್ದಾರೆ ಎಂದೂ ಡಿಕೆ ಶಿವಕುಮಾರ್ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.




