30.5 C
Mumbai
June 8, 2026
Mumbai News Kannada
ಕರ್ನಾಟಕ

ಕರ್ನಾಟಕ : ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಘೋಷಣೆ





ಒಟ್ಟಿಗೆ ಸೇರಿ ನಾವು ಕೆಲಸ ಮಾಡಿಕೊಂಡು ಹೋಗ್ತೇವೆ. ಹೈಕಮಾಂಡ್‌ ಏನು ಹೇಳುತ್ತೆ ಹಾಗೆ ಕೆಲಸ ಮಾಡಿಕೊಂಡು ಹೋಗ್ತೇವೆ. ಮುಂದೆ 2028ರಲ್ಲಿ ಸರಕಾರವನ್ನು ಅಧಿಕಾರಕ್ಕೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ ಬೆಳಗ್ಗಿನ ಉಪಹಾರಕ್ಕೆ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ್ದ ಡಿಕೆ ಶಿವಕುಮಾರ್‌, ಉಪಹಾರದ ನಂತರದ ಪತ್ರಿಕಾಗೋಷ್ಠಿಯಲ್ಲಿ ಈ ಮಾತುಗಳನ್ನು ತಿಳಿಸಿದರು.

ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ, “ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ. ಇದನ್ನು ನಾವು ಹಿಂದೆಯೂ ಸ್ಪಷ್ಟಪಡಿಸಿದ್ದೇವೆ. ಈಗಲೇ ಇದನ್ನೇ ಹೇಳುತ್ತೇವೆ,” ಎಂದರು.

ಮುಂದಿನ ಎರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಊಟಕ್ಕೆ ನಮ್ಮ ಮನೆಗೆ ಬರಲಿದ್ದಾರೆ ಎಂದೂ ಡಿಕೆ ಶಿವಕುಮಾರ್‌ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,: ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ ಸಮ್ಮತಿ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

“ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಅಭಿವಂದನಾ ಕಾರ್ಯಕ್ರಮ

Mumbai News Desk