32 C
Mumbai
March 7, 2026
Mumbai News Kannada
ಕರ್ನಾಟಕ

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು





ಶಬರಿಮಲೆ ಅಯ್ಯಪ್ಪ ಮಾಲೆ  ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು  ಕಾಲೇಜಿನಿಂದ  ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿದ್ದಾರೆ.

ಚಿಕ್ಕಮಗಳೂರು ನಗರದ ಎಂ ಇ ಯಸ್ ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಾರೆ. ಆದ್ರೆ, ಇದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ‌ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು.

ಕಾಲೇಜು ಬಳಿ ನೂರಾರು ಹಿಂದೂ ಸಂಘಟನೆ ಕಾರ್ಯಕರ್ತರು ಆಗಮಿಸಿ ಆಡಳಿ ಮಂಡಿಳಿ ವಿರುದ್ಧ ಆಕ್ರೋಶ ವ್ಯಕ್ತಡಿಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿ ವಾದ ವಿವಾದದ ಬಳಿಕ ಅಂತಿಮವಾಗಿ ಅಯ್ಯಪ್ಪ ಮಾಲೆ ಹಾಕಿಕೊಂಡು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತರಗತಿಗೆ ಕೂಡಲು ಪ್ರಿನ್ಸಿಪಾಲ್ ಅನುಮತಿ ನೀಡಿದ್ದಾರೆ. ಜೊತೆಗೆ ಆಡಳಿತ ಮಂಡಳಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಎಂ ಇ ಎಸ್ ಪಿಯು ಕಾಲೇಜಿನ ಪ್ರಿನ್ಸಿಪಾಲ್, ನಾವು ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.



Related posts

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk

ಮಂಗಳೂರು : ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

Mumbai News Desk

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk