30.9 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?





ಪೋಲೀಸರಿಂದ ಯುವತಿಯ ಮೇಲಿನ ಹಲ್ಲೆ ಪ್ರಕರಣವು ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ ಅಕ್ಷತಾ ಪೂಜಾರಿ ಎಂಬ ಯುವತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಆರೋಪ ಕೇಳಿ ಬರುತ್ತಿದ್ದಂತೆ ಬಿಲ್ಲವ ಸಮುದಾಯ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಘಟನೆಯ ಹಿನ್ನೆಲೆ ಮತ್ತು ಪ್ರಮುಖ ಅಂಶಗಳು :

ಬ್ರಹ್ಮಾವರ ಠಾಣಾ ವ್ಯಾಪ್ತಿಯ ಉಪ್ಪೂರು ನಿವಾಸಿ ಅಕ್ಷತಾ ಪೂಜಾರಿ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. 2014ರಲ್ಲಿ ದೇವೇಂದ್ರ ಸುವರ್ಣ ಎಂಬವರಿಗೆ ಆಶಿಕ್ ಎಂಬ ಯುವಕ ಬೈಕ್ ಅಪಘಾತ ಮಾಡಿದ್ದ, ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಇಂದಿಗೂ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆಶಿಕ್​​​ಗೆ 25 ಲಕ್ಷ ಪರಿಹಾರವನ್ನು ನೀಡಬೇಕು ಎಂದು ಆದೇಶ ನೀಡಿತ್ತು. ಆದರೆ ಆಶಿಕ್ ಪರಿಹಾರ ನೀಡದೆ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು. ಆಶಿಕ್​​ಗಾಗಿ ಪೊಲೀಸರು ಹಲವಾರು ಬಾರಿ ಹುಡುಕಾಟ ನಡೆಸಿದ್ದರು. ಆತ ಉಪ್ಪೂರಿನಲ್ಲಿರುವ ಅಜ್ಜಿಯ ಮನೆಯಲ್ಲಿ ಇದ್ದಾನೆ ಎಂಬ ಲೊಕೇಶನ್ ಆಧಾರದಲ್ಲಿ ಪೊಲೀಸರು ಮುಂಜಾನೆ 4:00 ಗಂಟೆ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ಷತಾ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರು ಹೇಳುವ ಪ್ರಕಾರ ನ್ಯಾಯಾಲಯದ ಆದೇಶದಂತೆ ಕೆಲಸ ಮಾಡಿದ್ದೇವೆ.  ಕಾನೂನು ಪ್ರಕಾರ ಏನು ಮಾಡಬೇಕು ಅದನ್ನು ನಾವು ಮಾಡಿದ್ದೇವೆ. ಜತೆಗೆ ನ್ಯಾಯಾಲಯ ಹೇಳಿದಂತೆ ಆಶಿಕ್​​ ಮನೆಗೆ ದಾಳಿ ಮಾಡುವ ವೇಳೆ ನಮ್ಮ ಜತೆಗೆ ಕೋರ್ಟ್ ಅಮೀನ್ (ನ್ಯಾಯಾಲಯದಿಂದ ನೇಮಿಸಲ್ಪಟ್ಟ ಅಧಿಕಾರಿ) ಕೂಡ ಇದ್ದರು ಎಂದು ಹೇಳಿದ್ದಾರೆ. ಇನ್ನು ಈ ದಾಳಿಯ ವೇಳೆ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಆಶಿಕ್ ನ ಸಹೋದರ ಸಂಬಂಧಿ ಅಕ್ಷತಾ ಪೂಜಾರಿ ಆರೋಪಿಸುತ್ತಿದ್ದಾರೆ. ಪೊಲೀಸರು ದಾಳಿಯ ವೇಳೆ ಅವರ ಜತೆಗೆ ಕೋರ್ಟ್ ಅಮೀನ್ ಇರಲಿಲ್ಲ. ಇನ್ನು ಅವರ ಜತೆಗೆ ಒಬ್ಬ ಮಹಿಳಾ ಪೊಲೀಸ್ ಕೂಡ​​ ಇರಲಿಲ್ಲ ಎಂದು ಅಕ್ಷತಾ ಹೇಳಿದ್ದಾರೆ. ಸದ್ಯಕ್ಕೆ ಆಕೆಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಅಕ್ಷತಾ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದು, ಯಾವುದೇ ಎಫ್​​ಐಆರ್​ ದಾಖಲಿಸಿಲ್ಲ. ಇದು ಬಿಲ್ಲವ ಸಂಘಟನೆಗಳನ್ನು ಕೆರಳಿಸಿದೆ. ತಮ್ಮ ಸಮುದಾಯದ ಯುವತಿಗೆ ಅನ್ಯಾಯ ಆಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯ ಮೊರೆ ಹೋಗಿದ್ದಾರೆ. ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ. ಇದರ ನಡುವೆ ಬಿಲ್ಲವ ಮುಖಂಡರು ಸಭೆಗಳನ್ನು ನಡೆಸಿದ್ದು, ಅಕ್ಷತಾ ಪೂಜಾರಿ ಪರ ಹೋರಾಟಕ್ಕೆ ಸಿದ್ಧತೆ ಆರಂಭಿಸಿದ್ದಾರೆ. ಕಾನೂನು ಪ್ರಕಾರ ಆರೋಪಿಯನ್ನು ಬಂಧಿಸೋದರ ಬದಲಾಗಿ, ಕಾನೂನು ಮೀರಿ ಪೊಲೀಸರು ವರ್ತಿಸಿದ್ದಾರೆ. ಕಾನೂನು ಬಾಹಿರವಾಗಿ ಕೋರ್ಟ್ ಅಮೀನರನ್ನು ಕರೆತರದೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರನ್ನು ಅಮಾನತು ಮಾಡಬೇಕು. ಅಕ್ಷತಾ ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕು. ಅಕ್ಷತಾ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಬಿಲ್ಲವ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.



Related posts

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk