ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ಮೋಹನ್ ಬಿ. ಎಂ. (ಬೆಳ್ಛಡ) (69) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಡಿ. 19 ರಂದು ಮಂಗಳೂರು ಕಟೀಲು ಸಮೀಪದ ತನ್ನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಮೃತರು ಒರ್ವ ಪುತ್ರ, ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ಅಗಲಿಕೆ ಬಗ್ಗೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ




