27.7 C
Mumbai
July 23, 2026
Mumbai News Kannada
ಕರ್ನಾಟಕ

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು







ಕೊಪ್ಪಳ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ, ಏರ್ ಫೈರ್ ನಡೆದಿದೆ. ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಗುರುತುಸಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್‌ ಶಾಸಕ ನಾರಾ ಭರತರಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ, ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ ಅಥವಾ ಸತೀಶ್‌ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಇನ್ನೂ ಖಚಿತವಾಗಿಲ್ಲ.
ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್‌ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ ಬ್ಯಾನರ್ ಹಾಕದಂತೆ ರೆಡ್ಡಿ ಅಪ್ತರು ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಿದ್ದಾರೆ. ಈ ವೇಳೆ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಈ ಬೆನ್ನಲ್ಲೇ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಕೂಡಾ ಘಟನಾ ಸ್ಥಳಕ್ಕೆ ಬಂದಿದ್ದಾರೆ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು, ಮುಖಂಡರು, ಜಮಾಯಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ, ನಾನು ಕಾರಿನಿಂದ ಇಳಿದ ಮೇಲೆ ಫೈರಿಂಗ್ ನಡೆದಿದೆ. ನನ್ನನ್ನು ಟಾರ್ಗೆಟ್ ಮಾಡಿ ಗನ್ ಮ್ಯಾನ್ ಗಳು ಫೈರಿಂಗ್ ನಡೆಸಿದ್ದಾರೆ ಎಂದು ಫೈರ್ ಮಾಡಿದ ಬುಲೆಟ್ ನ್ನು ತೋರಿಸಿದ್ದಾರೆ. ವಾಲ್ಮೀಕಿ ಪುತ್ಥಳಿ ಅನಾವರಣ ಹೆಸರಿನಲ್ಲಿ ಬೆಂಕಿ ಹಚ್ಚಲಾಗುತ್ತಿದೆ. ಕೊಲೆಗಡುಕರನ್ನು ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

.

.



Related posts

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅನಿತಾ ಕಾಸರಗೋಡು ಬಂಧನ

Mumbai News Desk

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk