27.1 C
Mumbai
July 23, 2026
Mumbai News Kannada
ಕರ್ನಾಟಕ

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ








ಉಡುಪಿ: ಕಾರ್ಕಳ – ಬೈಲೂರು – ಕಣಜಾರು–ಪಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಕಳೆದ ಗುರುವಾರದಿಂದ 08 -01 -2026 ರಿಂದ ದಿಢೀರ್ ಸ್ಥಗಿತಗೊಳಿಸಿರುವುದನ್ನು ಪ್ರತಿಭಟಿಸಿ, ಪಳ್ಳಿ ಮತ್ತು ನಿಂಜೂರು ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳಾದ ಅಬೀದ್ ಗದ್ಯಾಳ ಅವರಿಗೆ ಗ್ರಾಮಸ್ಥರು ಅಹವಾಲು ಸಲ್ಲಿಸಿದರು.

ಸಂಕಷ್ಟದಲ್ಲಿ ವಿದ್ಯಾರ್ಥಿಗಳು ಮತ್ತು ಮಹಿಳೆಯರು :
ಈ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಸನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ವೃದ್ಧರು ಬಸ್ ಸ್ಥಗಿತದಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್‌ಗಳಲ್ಲಿ ಜಾಗವಿಲ್ಲದೆ ಬಾಗಿಲಲ್ಲಿ ನೇತಾಡಿಕೊಂಡು ಪ್ರಯಾಣಿಸುವಂತಾಗಿದೆ. ಸರ್ಕಾರದ ಉಚಿತ ಬಸ್ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆಯರಿಗೂ ಈಗ ಆರ್ಥಿಕ ಹೊರೆ ಮತ್ತು ಸಂಚಾರದ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಪ್ರಮುಖ ಬೇಡಿಕೆಗಳು:
ಸ್ಥಗಿತಗೊಂಡಿರುವ ಕಾರ್ಕಳ – ಪಳ್ಳಿ – ಉಡುಪಿ ಸರ್ಕಾರಿ ಬಸ್ ಸಂಚಾರವನ್ನು ತಕ್ಷಣವೇ ಪುನಾರಂಭಿಸಬೇಕು.
ಸಾರ್ವಜನಿಕ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ಸೇವೆ ಖಾತರಿಪಡಿಸಬೇಕು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ರಘುನಾಥ ಶೆಟ್ಟಿ ಪಳ್ಳಿ, ದಿನಕರ್ ಶೆಟ್ಟಿ ನಿಂಜೂರು, ವಿಶ್ವನಾಥ ಭಂಡಾರಿ, ಫಿಲೋಮಿನ ಮೆಂಡೋನ್ಸಾ, ಸಂತೋಷ್ ಶೆಟ್ಟಿ, ದಿಲೀಪ್ ಹೆಗ್ಡೆ, ವಿಲ್ಸನ್ ಲೋಬೋ, ನೆಲ್ಸನ್ ಡಿಸೋಜ, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿಗಳು, ಈ ಕುರಿತು ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವರದಿ: ಚಂದ್ರಹಾಸ ಮೆಂಡನ್



Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,: ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ ಸಮ್ಮತಿ

Mumbai News Desk

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕ: ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk