July 23, 2026
Mumbai News Kannada
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ







​ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಕೈಗಾರಿಕೀಕರಣದ ಕುರಿತು ಸಮಾಲೋಚನೆ ನಡೆಸಲು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಪ್ರಮುಖರು ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
​ಪದ್ಮವಿಭೂಷಣ ಪುರಸ್ಕೃತರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ​ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಪ್ರವರ್ತಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಹಾಗೂ ರಾಜ್ಯ ಸಂಚಾಲಕರಾದ ಕೆ. ಪಿ. ಜಗದೀಶ್ ಅಧಿಕಾರಿ ಅವಳಿ ಜಿಲ್ಲೆಗಳ ಅಭಿವೃದ್ಧಿ ಪಥದ ಕುರಿತು ಮಹತ್ವದ ಮಾತುಕತೆ ನಡೆಸಿದರು.
ಅವರು ಮೊದಲು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಡಾ. ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಳೆದ 25 ವರ್ಷಗಳಿಂದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಕರಾವಳಿ ಭಾಗದಲ್ಲಿ ನಡೆಸುತ್ತಾ ಬಂದಿರುವ ಸಮಾಜಮುಖಿ ಕೆಲಸಗಳು ಹಾಗೂ ಪರಿಸರ ಸಂರಕ್ಷಣೆಯ ನಡುವೆ ಕೈಗಾರಿಕಾ ಪ್ರಗತಿ ಸಾಧಿಸುವ ಕುರಿತಾದ ಕಾರ್ಯಚಟುವಟಿಕೆಗಳನ್ನು ಡಾ. ಹೆಗ್ಗಡೆಯವರಿಗೆ ಮನವರಿಕೆ ಮಾಡಿಕೊಡಲಾಯಿತು.
​ಅವಿಭಜಿತ ದಕ್ಷಿಣ ಕನ್ನಡ (ದಕ್ಷಿಣ ಕನ್ನಡ ಮತ್ತು ಉಡುಪಿ) ಜಿಲ್ಲೆಗಳಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಸುಸ್ಥಿರ ಕೈಗಾರಿಕೀಕರಣದ ಅಗತ್ಯತೆ, ಪ್ರವಾಸೋದ್ಯಮದ ಅಭಿವೃದ್ಧಿ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ನೀಡುವ ನಿಟ್ಟಿನಲ್ಲಿ ಸಮಿತಿಯು ಹಮ್ಮಿಕೊಂಡಿರುವ ಯೋಜನೆಗಳಿಗೆ ಡಾ. ಹೆಗ್ಗಡೆಯವರು ಮಾರ್ಗದರ್ಶನ ನೀಡಿದರು.
​ಬಳಿಕ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರು, “ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ನಮ್ಮ ಸಮಿತಿಗೆ ಆನೆಬಲ ತಂದಿದೆ. ಜಿಲ್ಲೆಯ ಪರಿಸರವನ್ನು ಕಾಪಾಡಿಕೊಂಡು ಕೈಗಾರಿಕೆಗಳನ್ನು ಬೆಳೆಸುವ ನಮ್ಮ ಆಶಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,” ಎಂದರು.
​ರಾಜ್ಯ ಸಂಚಾಲಕ ಕೆ. ಪಿ. ಜಗದೀಶ್ ಅಧಿಕಾರಿ ಅವರು ಮಾತನಾಡಿ, “ಸಮಿತಿಯ ಮುಂದಿನ ಯೋಜನೆಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರದ ಮಟ್ಟದಲ್ಲಿ ಕರಾವಳಿಯ ಅಭಿವೃದ್ಧಿಯ ಧ್ವನಿಯನ್ನು ಎತ್ತರಿಸಲು ಡಾ. ಹೆಗ್ಗಡೆ ಅವರೊಂದಿಗೆ ಇಂದಿನ ಚರ್ಚೆ ಪೂರಕವಾಗಿದೆ,” ಎಂದು ತಿಳಿಸಿದರು.



Related posts

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk