25 C
Mumbai
March 7, 2026
Mumbai News Kannada
ಕರ್ನಾಟಕ

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ





ಬೆಂಗಳೂರು: ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಇದೀಗ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಶೈಲು ಶಿಕ್ಷೆ ವಿಧಿಸಿದ್ದಾರೆ.

‘ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ಈ ಹಿನ್ನೆಲೆಯಲ್ಲಿ ರಾಕೇಶ್‌ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ



Related posts

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

“ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಅಭಿವಂದನಾ ಕಾರ್ಯಕ್ರಮ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಶಾಂಕ್ ಎಸ್ ಶೆಟ್ಟಿಗೆ ಶೇಕಡಾ 97 ಅಂಕ

Mumbai News Desk