32 C
Mumbai
March 7, 2026
Mumbai News Kannada
ಮುಂಬಯಿ

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.





ಶಹಾಡ್ (ಬಿರ್ಲಾ ಗೇಟ್): ಇಲ್ಲಿನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ (ಜ. 17) ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಿಳಾ ವಿಭಾಗದಿಂದ ಹಳದಿ ಕುಂಕುಮ ಕಾರ್ಯಕ್ರಮವು ಅತ್ಯಂತ ವಿಜ್ರಂಭಣೆಯಿಂದ ಜರುಗಿತು.

​ದಿನವಿಡೀ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ಬೆಳಿಗ್ಗೆ ಗಣಪತಿ ಪೂಜೆಯೊಂದಿಗೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು, ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯೊಂದಿಗೆ ಮುಂದುವರಿಯಿತು. ಇದೇ ಸಂದರ್ಭದಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಹಳದಿ ಕುಂಕುಮ’ ಕಾರ್ಯಕ್ರಮದಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಂಡು ಪರಸ್ಪರ ಸೌಭಾಗ್ಯ ದ್ರವ್ಯಗಳನ್ನು ಹಂಚಿಕೊಂಡರು.

​ಮಧ್ಯಾಹ್ನ ದೇವಸ್ಥಾನದ ಗರ್ಭಗುಡಿಯಲ್ಲಿ ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾಪೂಜೆ ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ಸತ್ಯನಾರಾಯಣ ದೇವರ ಸನ್ನಿಧಿಯಲ್ಲಿ ಸಿರಿಗಂಧ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆಯಲ್ಲಿ ಶಹಾಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಭಕ್ತ ಅಭಿಮಾನಿಗಳು ಭಾಗವಹಿಸಿ ಮಹಾಪ್ರಸಾದ ಸ್ವೀಕರಿಸಿದರು.

​ಪೂಜಾ ಕಾರ್ಯಕ್ರಮದ ಯಶಸ್ಸಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಟ್ರಸ್ಟಿಗಳು ಹಾಗೂ ಸಲಹೆಗಾರರು ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು. ಭಜನಾ ಮಂಡಳಿಯ ಸದಸ್ಯರಿಂದ ನಡೆದ ಭಜನಾ ಕಾರ್ಯಕ್ರಮವು ಭಕ್ತರಲ್ಲಿ ದೈವಿಕ ಭಕ್ತಿಯ ಸಂಚಲನ ಮೂಡಿಸಿತು.



Related posts

ಕಲಾ ಜಗತ್ತು ಮುಂಬಯಿ ಮತ್ತು ಡಾ. ಸದಾನಂದ ಶೆಟ್ಟಿ ಅಭಿನಂದನಾ ಬಳಗ ಇವರ ಸಹಯೋಗದಲ್ಲಿ ಡಾ. ಸದಾನಂದ ಶೆಟ್ಟಿ ಯವರಿಗೆ ಹೃದಯಸ್ಪರ್ಶಿ ಅಭಿನಂದನಾ ಸಮಾರಂಭ.

Mumbai News Desk

ಮುಂಬೈ ಬಿಲ್ಲವರು ಆಯೋಜನೆಯಲ್ಲಿ ಅರಶಿನ ಕುಂಕುಮ, ವಿಧವೆಯರಿಗೆ  ಸೀರೆ, ಧನ ಸಹಾಯ ವಿತರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಜೀವಿಕ ವಿಜಯಓದ್ಭಾವ ಶೆಟ್ಟಿ ಗೆ ಶೇ 94 ಅಂಕ.

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ಅರಸಿನ ಕುಂಕುಮ,

Mumbai News Desk

ಕರುನಾಡ ಸಿರಿ ವಾರ್ಷಿಕ ಕ್ರೀಡಾಕೂಟ ಯಶಸ್ವಿ ಸಂಪನ್ನ.

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಶೀರೂರು ಮಠಾಧಿಪತಿ, ಪೂಜ್ಯ ವೇದವರ್ಧನತೀರ್ಥ ಶ್ರೀಪಾದರ ಆಗಮನ.

Mumbai News Desk