29 C
Mumbai
March 6, 2026
Mumbai News Kannada
ತುಳುನಾಡು

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ





ಸಮಾಜ ಸೇವೆ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡರೆ ಸಾರ್ಥಕವಾಗಲು ಸಾಧ್ಯ ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು. ಅವರು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಹೊಸ ಅಂಗಳ ತಿಂಗಳ ಬೆಳಕು ಹಾಗೂ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಮೂಲ್ಕಿ ಕೆ.ಎಸ್. ರಾವ್ ನಗರದ ಸಾಮಾಜಿಕ ಕಾರ್ಯಕರ್ತ ಜನಾರ್ದನ ಬಂಗೇರವವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಜನಾರ್ಧನ ಬಂಗೇರ ಮಾತನಾಡುತ್ತಾ ಮೂಲ್ಕಿ ಕೆ.ಎಸ್. ರಾವ್ ನಗರದಲ್ಲಿ ಬಹಳಷ್ಟು ಸಮಸ್ಯೆಗಳು ಕಾಡುತ್ತಿದ್ದ ಸಂದರ್ಭದಲ್ಲಿ ಜನರಿಗೆ ನೀರಿನ ಅಭಾವ ಬಂದಾಗ ಪ್ರತಿಭಟನೆಗಳನ್ನು ನಡೆಸಿ ತುಂಬೆಯಿಂದ ನೀರು ಸರಬರಾಜು ಮಾಡಲು ಪ್ರಯತ್ನಿಸಿದೆ, ಅದಲ್ಲದೆ ಇಲ್ಲಿಯ 500 ಮನೆಯ ಜನರಿಗೆ ಹಕ್ಕು ಪತ್ರ ಕೊಡುವುದಕ್ಕೆ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದೇನೆ. ಕೆಲವು ಮನೆಗಳಿಗೆ ಹೌಸಿಂಗ್ ಬೋರ್ಡ್‌ನಿಂದ ಮನೆ ನಿರ್ಮಾಣಕ್ಕೆ ಸಾಲ ಸಿಗುವುದಕ್ಕೆ ಪ್ರಯತ್ನಿಸಿದ್ದೇನೆ ಹೀಗೆ ಒಂದಲ್ಲ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿದ್ದೇನೆ. ಇನ್ನೂ ಕೂಡ ಮಾಡಲು ತಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.


ಮುಖ್ಯ ಅತಿಥಿಗಳಾಗಿ ಸಾಹಿತಿ ಜೊಸ್ಸಿ ಪಿಂಟೋ ಕಿನಿಗೋಳಿ, ಕಾಂತು ಸೇವೆಗಾರ ಟ್ರಸ್ಟ್‌ನ ಅಧ್ಯಕ್ಷ ವಾಸು ಪೂಜಾರಿ ಕೊಲಕಾಡಿ, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ನಾರಾಯಣ ಗುರು ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ಮತ್ತು ಹಳೆಯಂಗಡಿ ಬಂಕಿ ನಾಯಕರು, ಕೇಶವಾನಂದ ಗುರೂಜಿ ಚಿತ್ರಾಪು, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ವಾಸು ಪೂಜಾರಿ ಚಿತ್ರಾಪು, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲ್ಯಾನ್, ಉದ್ಯಮಿ ಜೋನ್ ಕ್ವಾಡ್ರಸ್, ಜೆ.ಸಿ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಹಬಿಬುಲ್ಲ, ನ್ಯಾಯವಾದಿ ರವೀಶ್ ಕಾಮತ್, ದೀಪ್ತಿ ಸಾಧು ಅಂಚನ್ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಕೆ. ಎಮ್ ಕೊಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.
ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ವಾಮನ್ ಕೋಟ್ಯಾನ್ ಧನ್ಯವಾದ ಅರ್ಪಿಸಿದರು. ರವಿಚಂದ್ರ ಕಾರ್ಯಕ್ರಮ ನಿರ್ವಹಿಸಿದರು.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ರೋಟರಿ ಕ್ಲಬ್ ಶಂಕರಪುರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ ,

Mumbai News Desk

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್

Mumbai News Desk

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk