26.3 C
Mumbai
March 7, 2026
Mumbai News Kannada
ಸುದ್ದಿ

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ





ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಫೆಬ್ರವರಿ 7ರ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985 ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಜನತಾ ಪಕ್ಷದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯದ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿ ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಇವರು ತಾಲೂಕು ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಹಾಗೂ ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk