34 C
Mumbai
March 6, 2026
Mumbai News Kannada
ಸುದ್ದಿ

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ





ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಐವತ್ತಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆ ತರುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಗಮನಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು. ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ,ಕೋಡಿ- ಕುಂದಾಪುರ,ಬಾರ್ಕೂರು ಬಂದರು ಪ್ರದೇಶ ಹಾಗೂ ತ್ರಾಸಿ- ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಯೋಜನೆಗಳಲ್ಲಿ ನವೀಕರಿಸಬಹುದಾದ ಇಂಧನಗಳ ಬಳಕೆ, ಮೂಲ ಸೌಕರ್ಯ ಹಾಗೂ ಪ್ರವಾಸಿಗರಿಗೆ ಜಾಗತಿಕ ಅಭಿಯಾನಗಳು ಸೇರಿ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲೆಯ ಒಂದು ಪ್ರವಾಸಿ ತಾಣವನ್ನು ಆಯ್ಕೆ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ರೂಪಾಯಿ 300 ಕೋಟಿ ಅನುದಾನ ನೀಡಲಿದೆ ಪ್ರವಾಸಿ ತಾಣದ ಅಭಿವೃದ್ಧಿಗೆ ಖಾಸಗಿ ಸಹ ಭಾಗಿತ್ವವನ್ನು ಉತ್ತೇಜಿಸಲಾಗುವುದು. ಅದಕ್ಕೆ ಅಗತ್ಯವಿರುವ ಭೂಮಿಯನ್ನು ಸಹ ಒದಗಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್. ಎಂ ಉಪಸ್ಥಿತರಿದ್ದರು.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk