32.3 C
Mumbai
June 7, 2026
Mumbai News Kannada
ಸುದ್ದಿ

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು






 

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ನಂಬಲಾಗಿದೆ.

ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೆಟ್ಲಪಾಲಂ-ಜಿ. ಮೇಡುಪಾಡು ನಡುವೆ ಇರುವ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಕಾರ್ಮಿಕರ ಮೃತದೇಹಗಳು ನೂರಾರು ಅಡಿ ದೂರದ ಹೊಲಗದ್ದೆಗಳಿಗೆ ಹಾರಿಬಿದ್ದಿವೆ. ಸ್ಥಳೀಯ ಪೆದಪುಡಿ ರಸ್ತೆಯಲ್ಲಿರುವ ಅಡಪಾ ನಾನಿ ಎಂಬುವವರ ಕುಟುಂಬಕ್ಕೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.

ಈ ಭೀಕರ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ದುರ್ಘಟನೆ ಸಂಭವಿಸುವ ವೇಳೆ ಕಾರ್ಖಾನೆಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಿದ್ದಾರೆ. ಈ ದುರಂತವು ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಶೀಘ್ರದಲ್ಲೇ ಪರಿಹಾರ ಘೋಷಿಸುವ ಸಾಧ್ಯತೆಯಿದೆ.



Related posts

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk