July 22, 2026
Mumbai News Kannada
ಸುದ್ದಿ

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ







ಮಂತ್ರಾಲಯ: ಭಾರತದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಆಂಧ್ರಪ್ರದೇಶದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 25ರಂದು ನಡೆದ ಭವ್ಯ ಸಮಾರಂಭದಲ್ಲಿ, ಪ್ರಸಿದ್ಧ ಸಂಘಟಕ ಹಾಗೂ ಸಮಾಜ ಸೇವಕ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ‘ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026’ ನೀಡಿ ಗೌರವಿಸಲಾಯಿತು.

​ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರೂ ಆಗಿರುವ ಸೂರ್ಯಕಾಂತ್ ಅವರ ಸುದೀರ್ಘ ಸಮಾಜ ಸೇವೆ, ಸಮರ್ಥ ನಾಯಕತ್ವ ಮತ್ತು ಚಿಂತನಶೀಲ ವ್ಯಕ್ತಿತ್ವವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರಶಸ್ತಿ ಹಸ್ತಾಂತರಿಸಿದರು.

ಈ ಸಮಾರಂಭದಲ್ಲಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ಪ್ರಮುಖ ರಾಜಕೀಯ ಮುಖಂಡರು, ಕಾರ್ಮಿಕ ನಾಯಕರು ಹಾಗೂ ಮಂತ್ರಾಲಯ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಭಿನಂದನೆಗಳ ಮಹಾಪೂರ:

ಗುರುಗಳ ಅನುಗ್ರಹದೊಂದಿಗೆ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಜಯ ಸಿ. ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮುಂಬಯಿ ಬಿಲ್ಲವರು ಹೃತೂವ೯ಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸೂರ್ಯಕಾಂತ್ ಅವರ ನಾಯಕತ್ವವು ಸಮಾಜದ ಏಳಿಗೆಗೆ ಮತ್ತಷ್ಟು ಶಕ್ತಿಯಾಗಲಿ ಎಂದು ಅಭಿಮಾನಿ ಬಳಗ ಹಾರೈಸಿದೆ.



Related posts

ಅರುಣೋದಯ ಎಜುಕೇಶನ್ ಟ್ರಸ್ಟ್‌ನ ‘ಸ್ಟಾರ್ ಕಿಡ್ಸ್’ ಶಾಲಾ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಅನಿತಾ ಪಿ. ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ

Mumbai News Desk

ಮುಂಬೈ – ಮಂಗಳೂರು ನಡುವೆ ಹೊಸ ರೈಲು ಹಾಗೂ ವಂದೇ ಭಾರತ್ ಸ್ಲೀಪರ್ ಕೋಚ್‌ಗೆ ಆಗ್ರಹಿಸಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮನವಿ ಸಲ್ಲಿಕೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk