November 3, 2026
Mumbai News Kannada
ಸುದ್ದಿ

ಪುತ್ತೂರು :ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ!



ಧರ್ಮಸ್ಥಳ ಸಹಾಯಕ ಆಯುಕ್ತರು ಇಂದು (ಮಾ. 17)ಮೂರನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದ್ದಾರೆ
ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಹೊರಡಿಸಿ ಶಾಕ್ ನೀಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾ.16, 2026 ರಿಂದ ಸೆ.19, 2026ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಪ್ರತಿವಾದಿಗಳ ಆಕ್ಷೇಪಣೆಗಳನ್ನು ಆಲಿಸಿ, ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲೆ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಈಗಾಗಲೇ ಎರಡು ಬಾರಿ ಹೈಕೋರ್ಟ್ ಮೂಲಕ ತಡೆಯಾಜ್ಞೆ ಪಡೆಯಲು ಯತ್ನಿಸಿದ್ದ ತಿಮರೋಡಿ ಅವರಿಗೆ ಈ ಮೂರನೇ ಆದೇಶವು ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ಸೂಚನೆಯನ್ನು ಪಾಲಿಸಿ, ನಿಯಮಬದ್ಧವಾಗಿಯೇ ಎಸಿ ಅವರು ಈ ಆದೇಶ ನೀಡಿರುವುದರಿಂದ, ತಿಮರೋಡಿ ಈಗ ರಾಯಚೂರಿಗೆ ತೆರಳುತ್ತಾರಾ ಅಥವಾ ಮತ್ತೆ ಕಾನೂನು ಹೋರಾಟ ಮುಂದುವರಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ



Related posts

ವೇದಮೂರ್ತಿ ಪಂಜ ಭಾಸ್ಕರ ಭಟ್‌ಗೆ ‘ವೇದವಿಭೂಷಣ’ ಪ್ರಶಸ್ತಿ

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಸ್ಥಳೀಯರ ಹಕ್ಕುಗಳ ರಕ್ಷಣೆಗೆ ಬೃಹತ್ ಪ್ರತಿಭಟನೆ: ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಪೋಸ್ಟರ್ ರಿಲೀಸ್

Mumbai News Desk

ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಯನ್ನು ಸ್ವಾಗತಿಸಿದ ಪೇಜಾವರ ಶ್ರೀಗಳು

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಟ್ರಂಪ್ ಸುಂಕದ ಕ್ರಮಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಅದರ ಪರಿಣಾಮಗಳು

Mumbai News Desk