July 22, 2026
Mumbai News Kannada
ಸುದ್ದಿ

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ







ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.



Related posts

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ಶೀಘ್ರ ವಿಲೀನ: ಕರಾವಳಿ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ

Mumbai News Desk

ಇಂದು ನಡೆದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ವಿವಿಧ ಕ್ಷೇತ್ರಗಳ ಉಪಚುನಾವಣೆಯ ಮತದಾನದ ಪ್ರಕ್ರಿಯೆಯ ಕುರಿತಾದ ಸಮಗ್ರ ವರದಿ

Mumbai News Desk

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk