30.9 C
Mumbai
June 8, 2026
Mumbai News Kannada
ಮುಂಬಯಿ

ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ಕಾಮಗಾರಿ ಕುರಿತು ಸಭೆ





ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಏಪ್ರಿಲ್ 3ರ ಶುಕ್ರವಾರದಂದು ಜರುಗಿತು. ಮುಲ್ಕಿಯ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

​ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಒಕ್ಕೂಟದ ದಾನಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಅವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಉಮಾ ಕೃಷ್ಣ ಶೆಟ್ಟಿ ಅವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿದರು ಹಾಗೂ ಶೀಘ್ರಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

​ಸಭೆಯಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ನಿರ್ದೇಶಕರಾದ ಶಶಿಧರ್ ಶೆಟ್ಟಿ ಇನ್ನಂಜೆ, ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಬಂಟರ ಸಂಘ ಮುಂಬೈ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ್ ಶೆಟ್ಟಿ ಇಂದ್ರಾಳಿ, ಹುಬ್ಬಳ್ಳಿ ಬಂಟ್ಸ್ ಸಂಘದ ಸತೀಶ್ ಶೆಟ್ಟಿ, ವಿಶ್ವಪ್ರತಾಪ್ ಶೆಟ್ಟಿ ಮತ್ತು ಕಾಮಗಾರಿಗೆ ಸಂಬಂಧಿಸಿದ ಇತರರು ಉಪಸ್ಥಿತರಿದ್ದರು.

ಸಭಾಭವನದ ವಿಶೇಷತೆಗಳು:

ನಿರ್ಮಾಣಗೊಳ್ಳಲಿರುವ ಈ ಸಭಾಭವನವು ವಿಶಾಲವಾದ ಸಭಾಗ್ರಹ, ಕಿರು ಸಭಾಗ್ರಹ, ಸುಸಜ್ಜಿತ ವೇದಿಕೆ, ಧರ್ಮ ಚಾವಡಿ, ಅಡುಗೆ ಕೋಣೆ, ಗ್ರೀನ್ ರೂಮ್, ಓಪನ್ ಏರ್ ಗಾರ್ಡನ್ ಹಾಗೂ ಆಡಳಿತ ಕಚೇರಿ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ.



Related posts

ಮುಂಬೈ ಕುಲಾಲ ಸಂಘ ಮುಂಬೈ ಇದರ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಮಾತಾ ವೈಷ್ಣೋದೇವಿ ದರ್ಶನ: ಭಕ್ತಿ-ಒಗ್ಗಟ್ಟಿನ ಸಮಾಗಮ

Mumbai News Desk

ಥಾಣೆ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಷನ್ ದಶಮಾನೋತ್ಸವ, ಸಾಂಸ್ಕೃತಿಕ ವೈಭವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk

ಕುಲಾಲ ಸಂಘ ಮುಂಬಯಿ ಇದರ ನವಿ ಮುಂಬೈ ಸ್ಥಳೀಯ ಸಮಿತಿಯ ಸತ್ಯನಾರಾಯಣ ಪೂಜೆ, 150 ನೇ ತಿಂಗಳ ಭಜನೆ, ಹಳದಿ ಕುಂಕುಮ

Mumbai News Desk