September 6, 2026
Mumbai News Kannada
ತುಳುನಾಡು

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ





ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ನಡೆಯುತ್ತಿದ್ದು, ಇದರ ಅಂಗವಾಗಿ ಪೂರ್ವ ದಿಕ್ಕಿನ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಭವ್ಯವಾದ ಸ್ವಾಗತ ಗೋಪುರವನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಕೋಟಿಗೂ ಅಧಿಕ ವೆಚ್ಚದ ಈ ಯೋಜನೆಯನ್ನು ಸಂಪೂರ್ಣವಾಗಿ ಬಿಲ್ಲವ ಸಮುದಾಯದ ವತಿಯಿಂದಲೇ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದ್ದು, ಈ ಕುರಿತು ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿದೆ. ಬೆಂಗಳೂರಿನ ಉದ್ಯಮಿ ಶರತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ದುಗ್ಗಣ್ಣ ಸಾವಂತ ಅರಸರು ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಅವರಿಗೆ ಈ ಪ್ರಸ್ತಾವನೆಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಅರ್ಚಕ ಗೋಪಾಲಕೃಷ್ಣ ಭಟ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ದು ಉಪಸ್ಥಿತರಿದ್ದರು. ಅಲ್ಲದೆ ಬಿರುವೆರ್ ಕುಡ್ಲ ಸಂಘಟನೆಯ ಗೌರವಾಧ್ಯಕ್ಷ ಕಿಶೋರ್ ಸಾಲ್ಯಾನ್, ಚಂದ್ರಶೇಖರ ಸುವರ್ಣ, ಅಭಿವೃದ್ಧಿ ಸಮಿತಿಯ ಚಂದ್ರಶೇಖರ ಕಾಸಪ್ಪಯ್ಯನವರ ಮನೆ, ಸುನಿಲ್ ಆಳ್ವ, ರಾಮಚಂದ್ರ ನಾಯಕ್ ಕೋಲಾಡು ಗುತ್ತು, ಭಾಸ್ಕರ್ ಸಾಲ್ಯಾನ್ ಹಳೆಯಂಗಡಿ ಹಾಗೂ ಸಂಜೀವ ದೇವಾಡಿಗ ಅವರು ಭಾಗವಹಿಸಿದ್ದರು. ಶರತ್ ಹೆಜಮಾಡಿ, ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಚಂದ್ರಕಾಂತ ಶ್ರೀಯಾನ್, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತು ಗಿರೀಶ್ ಮಂಡನ್ ಸೇರಿದಂತೆ ಅನೇಕ ಗಣ್ಯರು ಈ ಮಹತ್ವದ ನಿರ್ಧಾರದ ವೇಳೆ ಜೊತೆಯಲ್ಲಿದ್ದರು.



Related posts

ಪಡುಬಿದ್ರಿ : ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ, ಉಪನ್ಯಾಸ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಪಡುಮಾರ್ನಾಡು ಯುವಕ ಮಂಡಲದ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ, ಪ್ರಜ್ಞಾ ಯುವತಿ ಮಂಡಲದ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆ

Mumbai News Desk