September 6, 2026
Mumbai News Kannada
ಸುದ್ದಿ

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ





ರಾಯಚೂರು/ಮಂತ್ರಾಲಯ: ಶ್ರೀ ಕ್ಷೇತ್ರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾಗಿ ಮರಳುತ್ತಿದ್ದ ಭಕ್ತರ ಪಾಲಿಗೆ ವಿಧಿ ಕ್ರೂರವಾಗಿ ಅಟ್ಟಹಾಸ ಮೆರೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ಆಗಮಿಸಿದ್ದ ಭಕ್ತರು, ಗುರು ಸಾರ್ವಭೌಮರ ದರ್ಶನ ಮುಗಿಸಿ ತಮ್ಮ ಊರಿಗೆ ಬೊಲೆರೋ ವಾಹನದಲ್ಲಿ ಮರಳುತ್ತಿದ್ದರು. ಈ ವೇಳೆ ಕಲ್ಲುದೇವರಕುಂಟ ಗ್ರಾಮದ ಬಳಿ ವೇಗವಾಗಿ ಬಂದ ಸಿಮೆಂಟ್ ಹಾಗೂ ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್, ಭಕ್ತರಿದ್ದ ಬೊಲೆರೋ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ಕರ್ನೂಲ್ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



Related posts

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk

ಮೂಳೂರು: ಬಿಕ್ರಿಗುತ್ತು ಶಕುಂತಳಾ ಡಿ ಹೆಗ್ಡೆ ನಿಧನ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

ದಿಶಾ ಸಾಲಿಯನ್ ಪ್ರಕರಣ: ಎಫ್‌ಐಆರ್ ದಾಖಲಿಸದ ಮುಂಬೈ ಪೊಲೀಸರನ್ನು ತೀವ್ರವಾಗಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್

Mumbai News Desk

ಹೋಟೆಲ್ ಉದ್ಯಮಿ, ಸಂಘಟಕ ದುರ್ಗಾಪ್ರಸಾದ್ ಸಾಲ್ಯಾನ್ ನಿಧನ

Mumbai News Desk