July 28, 2026
Mumbai News Kannada
ಸುದ್ದಿ

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ







ಮುಂಬಯಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರು ಹಾಗೂ ಖ್ಯಾತ ನ್ಯಾಯವಾದಿ ಶಶಿಧರ್ ಯು. ಕಾಪು (74) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ನಿಧನರಾದರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ಹಾಗೂ ನೋಟರಿ ಯೂನಿಯನ್ ಆಫ್ ಇಂಡಿಯಾದ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ನಿಯಮಿತದ ಮಾಜಿ ನಿರ್ದೇಶಕರಾಗಿಯೂ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಿಲ್ಲವರ ಅಸೋಸಿಯೇಷನ್ ಮುಂಬಯಿಯ ಹಿರಿಯ ಸದಸ್ಯರಾಗಿದ್ದ ಇವರು, ದಿವಂಗತ ಜಯ ಸಿ. ಸುವರ್ಣ ಅವರ ಆಪ್ತ ಅಭಿಮಾನಿಯಾಗಿದ್ದು ಸಮುದಾಯದ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಪುತ್ರ, ಸೊಸೆ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದು ಅಪರಾಹ್ನ 12.30ಕ್ಕೆ ಗೋರೆಗಾಂವ್ ಪೂರ್ವದ ಅವರ ಸ್ವಗೃಹದಿಂದ ಶವಯಾತ್ರೆ ಹೊರಟು, ಶಿವಧಾಮ್ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ, ಉಪ ಕಾರ್ಯಧ್ಯಕ್ಷ ನ್ಯಾಯವಾದಿ ಸೋಮನಾಥ್ ಬಿ ಅಮೀನ್ , ನಿರ್ದೇಶಕರುಗಳು , ಹಿರಿಯ ಅಧಿಕಾರಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಜಯ ಸಿ. ಸುವರ್ಣ ಅಭಿಮಾನಿ ಬಳಗ, ಮುಂಬೈ ಬಿಲ್ಲವರು ಮೃತರ ಆತ್ಮಕ್ಕೆ ಸದ್ಗತಿ ಕೋರಿ ಶ್ರದ್ಧಾಂಜಲಿ ಅರ್ಪಿಸಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಏಕೈಕ ಸರ್ಕಾರೇತರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ ಇವರು ಸಲ್ಲಿಸಿದ ಸೇವೆ ಅಮೋಘವಾದುದು. ಸಮಿತಿಯ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುತಿದ್ದ, ಇವರ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ, ಗೌರವಾಧ್ಯಕ್ಷ ಡಾ. ಬಿ ಎಂ ಹೆಗ್ಡೆ, ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕುರು ಸುರೇಂದ್ರ ಸಾಲಿಯನ್, ಗೌರವ ಪ್ರಧಾನ ಕೋಶಾಧಿಕಾರಿ ಕಲ್ಯಾಣಪುರ ಸದಾನಂದ ಆಚಾರ್ಯ ಹಾಗೂ ಸಮಿತಿಯ ಉಪಾಧ್ಯಕ್ಷರುಗಳು, ಮಾಜಿ ಅಧ್ಯಕ್ಷರುಗಳು, ಸಲಹೆಗಾರರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ರಾಜ್ಯ ಸಂಯೋಜಕ ಜಗಧೀಶ್ ಅಧಿಕಾರಿ, ಉಪ ಕಾರ್ಯಧ್ಯಕ್ಷರುಗಳು, ಜಿಲ್ಲಾ ಕಾರ್ಯದರ್ಶಿಗಳಾದ ಜಿ. ಟಿ. ಆಚಾರ್ಯ, ಸುರೇಂದ್ರ ಮೆಂಡನ್, ಕೋಶಾಧಿಕಾರಿ ಪ್ರಭಾಕರ್ ಬಂಗೇರ ಕಾರ್ಕಳ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿ, ಕರಾವಳಿಯ ಅಭಿವೃದ್ಧಿ ಮತ್ತು ಸಮುದಾಯದ ಧ್ವನಿಯಾಗಿದ್ದ ಒಬ್ಬ ದಕ್ಷ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.



Related posts

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,

Mumbai News Desk

ಸರಳ ಸಜ್ಜನಿಕೆಯ ಸಮಾಜ ಸೇವಕ ಕೃಷ್ಣ ಶೀನ ಸಾಲಿಯಾನ್ ನಿಧನ

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk