31 C
Mumbai
September 11, 2026
Mumbai News Kannada
ಸುದ್ದಿ

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ





ಉಡುಪಿಯ ನಗರ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಸಂಕೀರ್ಣದಲ್ಲಿದ್ದ ಮೊಬೈಲ್ ಮೌತ್ತು ಹಾರ್ಡ್‌ವೇರ್ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ನೆಲ ಅಂತಸ್ತಿನಲ್ಲಿರುವ ಮೊಬೈಲ್ ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಪಕ್ಕದ ಹಾರ್ಡ್‌ವೇರ್ ಅಂಗಡಿಗೂ ವ್ಯಾಪಿಸಿದೆ. ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡಿದ್ದು, ಮಳಿಗೆಯಲ್ಲಿದ್ದ ದುಬಾರಿ ಬೆಲೆಯ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ಹಾರ್ಡ್‌ವೇರ್ ಸಾಮಗ್ರಿಗಳು ಬೆಂಕಿಯ ಜ್ವಾಲೆಗೆ ಸಿಲುಕಿ ಭಸ್ಮವಾಗಿವೆ ಎಂದು ವರದಿಯಾಗಿದೆ. .ಘಟನೆ ನಡೆದ ತಕ್ಷಣ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದು, ಈ ಅಗ್ನಿ ಅವಘಡದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ಥಳದಲ್ಲಿ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಮುಂಬೈ : ಮೊಗವೀರ ಸಮುದಾಯದ ಹಿರಿಯ ಮುಖಂಡ ಗುಂಡಿ ವಿ. ಕೆ. ಸುವರ್ಣ ನಿಧನ

Mumbai News Desk

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk