28 C
Mumbai
September 27, 2026
Mumbai News Kannada
ಮುಂಬಯಿ

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ



ಮಹಾರಾಷ್ಟ್ರ ರಾಜ್ಯ ಶಿಕ್ಷಣ ಮಂಡಳಿಯ ವತಿಯಿಂದ 2025-2026ರ ಶೈಕ್ಷಣಿಕ ಸಾಲಿನ ಎಸ್. ಎಸ್. ಸಿ ಬೋರ್ಡ ಪರೀಕ್ಷೆಯಲ್ಲಿ ಮುಂಬಯಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ನಡೆಸಿಕೊಂಡು ಬರುತ್ತಿರುವ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ. ಈ ಶಾಲೆಯಲ್ಲಿ ಹತ್ತನೇ ವರ್ಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶಾಲೆಗೆ ಶೇ 100 ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯಾದ ಸಂಗೀತಾ ಚಂದ್ರು ಚವಾನ ಇವರು ಶೇ 72.80 ರಷ್ಟು ಅಂಕಗಳನ್ನು ಪಡೆದು ಮುಂಬೈ ಕನ್ನಡ ಮಾಧ್ಯಮದ ರಾತ್ರಿ ಪ್ರೌಢ ಶಾಲೆಗಳಲ್ಲಿಯೇ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯಾದ ರಾಧಿಕಾ ಮಲ್ಲಿಕಾರ್ಜುನ ಭಾವಿಮನಿ
ಶೇ 66.40 ರಷ್ಟು ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಮತ್ತು ವಿದ್ಯಾರ್ಥಿಯಾದ ರಾಜು ತಿಪ್ಪಣ್ಣ ಡಪ್ಪಿನೂರು 64.60 ರಷ್ಟು ಅಂಕಗಳನ್ನು ಪಡೆದು ತೃತೀಯ ಸ್ಥಾನ ಗಳಿಸಿ ಪಡೆದಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕರಿಸಿದ ಪಾಲಕರಿಗೆ ಹಾಗೂ ಮಾರ್ಗದರ್ಶನ ನೀಡಿದ ಮುಖ್ಯಾಧ್ಯಾಪಕ ಮಲ್ಲಿಕಾರ್ಜುನ ಬಡಿಗೇರ ಮತ್ತು ಸಹಕರಿಸಿದ ಶಿಕ್ಷಕರ ವೃಂದದವರಿಗೆ ಮಾತೃಸಂಸ್ಥೆ ಬಿಲ್ಲವರ ಅಸೋಶಿಯೇಶನ್ ಇದರ ಅಧ್ಯಕ್ಷ ಶ್ರೀ ಹರೀಶ ಜಿ.ಅಮೀನ,ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ. ಜಿ.ಸಾಲಿಯಾನ್, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ರವಿ ಸನಿಲ್ ಮಾರ್ಗದರ್ಶಕರಾದ ಬನ್ನಂಜೆ ರವೀಂದ್ರ ಅಮೀನ್ ಮತ್ತು ಸರ್ವ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ವರ್ಗದವರೆಗೂ ಕಲಿಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ 2026-2027ರಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಕಲಿಕಾ ಉಪಕರಣ, ಬಸ್ಸು ಪಾಸ್, ಸಮವಸ್ತ್ರ ಒದಗಿಸಿ ಕೊಡಲಾಗುವುದು ಎಂದು ಬಿಲ್ಲವರ ಅಸೋಷಿಯೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ ಹರೀಶ. ಜಿ. ಸಾಲಿಯಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಕಲಾ ಜಗತ್ತು ಮುಂಬಯಿ ಮತ್ತು ಡಾ. ಸದಾನಂದ ಶೆಟ್ಟಿ ಅಭಿನಂದನಾ ಬಳಗ ಇವರ ಸಹಯೋಗದಲ್ಲಿ ಡಾ. ಸದಾನಂದ ಶೆಟ್ಟಿ ಯವರಿಗೆ ಹೃದಯಸ್ಪರ್ಶಿ ಅಭಿನಂದನಾ ಸಮಾರಂಭ.

Mumbai News Desk

ಗೊರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ ಸಮಾರಂಭಕ್ಕೆ ಚಾಲನೆ,

Mumbai News Desk

ಬಿಲ್ಲವರ ಅಸೋಸ್ಸಿಯೇಶನ್ ಮುಂಬಯಿ: ಗುರುಜಯಂತಿಯ ಶುಭ ಸಂಧರ್ಭದಲ್ಲಿ ಗೌರವಾಧ್ಯಕ್ಷರಾಗಿ ಪದಗ್ರಹಣ ಮಾಡಿದ ಎಲ್. ವಿ. ಅಮೀನ್

Mumbai News Desk

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಭಕ್ತಿಪೂರ್ವಕ ಮಹಾಶಿವರಾತ್ರಿ ಮತ್ತು ಭಜನೋತ್ಸವ

Mumbai News Desk

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk