27 C
Mumbai
September 29, 2026
Mumbai News Kannada
ಪ್ರಕಟಣೆ

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ



ಮುಂಬಯಿಯ ಪತ್ರಕರ್ತ ಸುಭಾಷ್ ಶಿರಿಯ ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ಬೆಂಗಳೂರು, ಇದರ ಸಹಯೋಗದಲ್ಲಿ ನೀಡುತ್ತಿರುವ 2026 ನೇ ವರ್ಷದ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಮೇ 16ರಂದು ಕಾಸರಗೋಡಿನ ಜಿಲ್ಲೆಯ ಕುಡಾಲ್ ಮೇರ್ಕಳ, ಸುಬ್ಬಯ್ಯ ಕಟ್ಟೆ, ಕಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆಯಲಿರುವ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಹಾಗೂ ಕನ್ನಡ ಸಾಂಸ್ಕೃತಿಕ ಉತ್ಸವ 2026 ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಬೆಳಿಗ್ಗೆ ಶೋಭಾಯಾತ್ರೆಯೊಂದಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಪ್ರಾರಂಭಗೊಳ್ಳಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಮಾನ್ಯ ಶ್ರೀ ಎನ್ ಎಸ್ ಭೋಸರಾಜು ಅವರು ಉದ್ಘಾಟಿಸಲಿದ್ದು. ಶ್ರೀಮದ್ ಎಡನೀರು ಮಠ ಕಾಸರಗೋಡಿನ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ಮಾನ್ಯ ಶ್ರೀ ರುದ್ರಪ್ಪ ಲಮಾಣಿ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕ ಎಂ ಕೆ ಎಂ ಅಶ್ರಫ್ ಅವರು ವಯಸ್ಸಲ್ಲಿದ್ದಾರೆ. ಮಾತ್ರವಲ್ಲದೆ ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರದ ಅಧ್ಯಕ್ಷ ಶ್ರೀ ಸೋಮಣ್ಣ ಬೇವಿನಮರದ, ಕರ್ನಾಟಕದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಾನ್ಯ ಕೆ ವಿ ಪ್ರಭಾಕರ್, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶ್ರೀ ಟಿಎಂ ಶಾಹಿದ್ ಅವರು ಅತಿಥಿಗಳಾಗಿ ಭಾಗವಹಿಸಲಿರುವರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಮಾತ್ರವಲ್ಲದೆ ವಿವಿಧ ಸಾಧಕರನ್ನು ಗೌರವಿಸಲಿದ್ದು ಹಾಗೂ ನಾಡಿನ ಹೆಸರಾಂತ ಪತ್ರಕರ್ತರನ್ನು ಗುರುತಿಸಿ ವಿವಿಧ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕರ್ನಾಟಕದ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳಿಂದ ಜಾನಪದ ವೈವಿಧ್ಯಗಳು ನಡೆಯಲಿರುವುದು.



Related posts

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ : ಜು. 29ಕ್ಕೆ ನಾಗರ ಪಂಚಮಿ ಉತ್ಸವ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk