October 17, 2026
Mumbai News Kannada
ಕರ್ನಾಟಕ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ



ಬೆಂಗಳೂರು ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಪ್ರತಿಭಾ ಅವರನ್ನು ರಾಜ್ಯ ಸರ್ಕಾರವು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ವರ್ಗಾಯಿಸಿದ್ದು, ಅವರು ಮೇ 30ರ ಶನಿವಾರದಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ . ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ಪ್ರತಿಭಾ ಅವರು ಈ ಹಿಂದೆ ಮಾಗಡಿ, ಕಾರ್ಕಳ ಹಾಗೂ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ತಹಶೀಲ್ದಾರ್ ಆಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ. ಸಾಹಿತ್ಯ, ಕನ್ನಡಾಭಿಮಾನ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸದಾ ಸಕ್ರಿಯರಾಗಿರುವ ಇವರ ಜನಪರ ಆಡಳಿತ ಸೇವೆಯನ್ನು ಗುರುತಿಸಿ 2025ರ ಸಾಲಿನ ಪ್ರತಿಷ್ಠಿತ ‘ವೀರ ಕನ್ನಡ್ತಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ನೂತನ ತಹಶೀಲ್ದಾರ್, ಸಾಗರ ತಾಲೂಕಿನ ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಪ್ರತಿಯೊಬ್ಬರಿಗೂ ಜನಪರ ಕಾಳಜಿಯ ಹಾಗೂ ಪಾರದರ್ಶಕ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ಅವರು ಈ ಸಂದರ್ಭದಲ್ಲಿ ದೃಢವಾಗಿ ತಿಳಿಸಿದ್ದಾರೆ.



Related posts

ತಾಯಿಯ ಅಗಲಿಕೆಯ ನೋವಿನಲ್ಲೂ ಅಪ್ರತಿಮ ಸಾಧನೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿನ ದಿಶಾ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅನಿತಾ ಕಾಸರಗೋಡು ಬಂಧನ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ವಿಧಾನಸಭಾ ಸದಸ್ಯತ್ವ ರದ್ದು,

Mumbai News Desk

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Mumbai News Desk