July 18, 2026
Mumbai News Kannada
ಸುದ್ದಿ

ದೆಹಲಿ ಹೋಟೆಲ್ ಅಗ್ನಿ ದುರಂತ: 21 ಜನ ದುರ್ಮರಣ







ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಹೋಟೆಲ್ ಅಗ್ನಿ ದುರಂತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿ ಶಿಕ್ಷಣ ಸಚಿವ ಆಶಿಶ್ ಸೂದ್ ಅವರು ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಬುಧವಾರ ಬೆಳಿಗ್ಗೆ ಸುಮಾರು 8:50 ರ ಸುಮಾರಿಗೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೋಟೆಲ್‌ನಲ್ಲಿದ್ದ 40 ಕ್ಕೂ ಹೆಚ್ಚು ಜನರನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಧ್ಯ ಏಷ್ಯಾ ಮತ್ತು ಆಫ್ರಿಕಾ ಖಂಡದ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದು, ತನಿಖೆ ಮುಂದುವರಿದಿದೆ.
ಈ ಭೀಕರ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.



Related posts

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (14/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ

Mumbai News Desk

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk