July 22, 2026
Mumbai News Kannada
ಸುದ್ದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.







ಸುದ್ದಿ ವಿವರ : ಪಿ.ಆರ್.ರವಿಶಂಕರ್ 8483980035

ಬೆಳ್ತಂಗಡಿ ತಾಲೂಕು ಕನ್ಯಾಡಿಯಲ್ಲಿನ ಸುಪ್ರಸಿದ್ಧ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶರಾದ ಮಹಾ ಮಂಡಲೇಶ್ವರ1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಯವರನ್ನು ಭೇಟಿಯಾಗಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು.


ಪ್ರಾಮುಖ್ಯವಾಗಿ ಅಯೋಧ್ಯೆ ಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಕ್ಷೇತ್ರದ ನೂತನ ಶಾಖಾ ಮಠ ಆಶ್ರಮದ ನಿರ್ಮಾಣ ಕಾರ್ಯದ ಬಗ್ಗೆ ಗೌರವಾನ್ವಿತ ಮುಖ್ಯಮಂತ್ರಿಗಳ ಜೊತೆ ವಿಚಾರ ವಿಮರ್ಶೆ ನಡೆಸಿದರು.
ಕನ್ಯಾಡಿಯ ಶ್ರೀ ರಾಮ ಕ್ಷೇತ್ರದಲ್ಲಿ ಜರಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಆಯೋಧ್ಯೆಯಲ್ಲಿನ ನಿರ್ಮಾಣವಾಗುತ್ತಿರುವ ನೂತನ ಶಾಖಾ ಮಠದಲ್ಲಿ ಭವಿಷ್ಯದಲ್ಲಿ ನಡೆಸಲು ಉದ್ದೇಶಿಸಿರುವ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ ಯವರಿಗೆ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ವಿವರಿಸಿದರು.
ಈ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ರಾಮಕ್ಷೇತ್ರದ ಶಾಖಾ ಮಠ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಜರಗಿದ ಈ ಭೇಟಿಯ ಸಂದರ್ಭದಲ್ಲಿ ದ.ಕ. ಮಾಜಿ ಸಂಸದ ಹಾಗೂ ಅಯೋಧ್ಯೆಯ ನೂತನ ಶಾಖಾಮಠ ನಿರ್ಮಾಣ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಶ್ರೀ ರಾಮ ಕ್ಷೇತ್ರದ ಶಿಷ್ಯವರ್ಗ ಮತ್ತು ಸ್ವಾಮಿಗಳ ಅಯೋಧ್ಯೆಯಲ್ಲಿನ ಶಿಷ್ಯವೃಂದದವರು ಉಪಸ್ಥಿತರಿದ್ದರು.
ಅಯೋಧ್ಯೆಯಲ್ಲಿನ ಶ್ರೀ ರಾಮಕ್ಷೇತ್ರದ ನೂತನ ಶಾಖಾಮಠದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಈ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಲ್ಲಿ ಮುಂಬೈ ವಲಯದ ಶೃದ್ಧಾಳು ಭಕ್ತಾದಿಗಳು ಈ ಸಂದರ್ಭದಲ್ಲಿ ತಮ್ಮ ಉದಾರ ದೇಣಿಗೆಯನ್ನಿತ್ತು ಪುಣ್ಯಕಾರ್ಯದಲ್ಲಿ ಸಹಕರಿಸಬೇಕಾಗಿ ಶ್ರೀ ಶಾಖಾಮಠ ನಿರ್ಮಾಣ ಸಮಿತಿಯು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.
ಸುದ್ದಿ ವಿವರ : ಪಿ.ಆರ್.ರವಿಶಂಕರ್, ಮುಂಬೈ
8483980035



Related posts

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk