July 27, 2026
Mumbai News Kannada
ತುಳುನಾಡು

ಬಿಲ್ಲವ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿ : ಪ್ರವೀಣ್‌ ಪೂಜಾರಿ ಆಗ್ರಹ.







ಮೂಡಿಗೆರೆ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ
ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಗುರಿಯಾಗಿಸಿಕೊಂಡು, ಅನಿತಾ ಕಾಸರಗೋಡು ಎಂಬ ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಹರಿಬಿಡುತ್ತಿರುವುದು ತೀವ್ರ ಖಂಡನೀಯ ಎಂದು ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್‌ ಪೂಜಾರಿ ತಿಳಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ತತ್ವಾದರ್ಶಗಳನ್ನು ಅನುಸರಿಸಿಕೊಂಡು ಬಂದಿರುವ ಬಿಲ್ಲವ ಸಮುದಾಯದ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸಿ ಸಮಾಜದ ಘನತೆಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿರುವುದು ಸಮುದಾಯದ ಭಾವನೆಗಳಿಗೆ ಗಂಭೀರ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಪೊಲೀಸ್‌ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದ್ದರೂ, ಈವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ಬಿಲ್ಲವ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಬೇಸರಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಸಮಾಜಗಳ ನಡುವೆ ದ್ವೇಷ ಮತ್ತು ವೈಮನಸ್ಸು ಸೃಷ್ಟಿಸುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಒಂದು ವೇಳೆ ನ್ಯಾಯಸಮ್ಮತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮುಂದುವರಿದರೆ, ರಾಜ್ಯದಾದ್ಯಂತ ಬಿಲ್ಲವ ಸಂಘ-ಸಂಸ್ಥೆಗಳು ಹಾಗೂ ಸಮಾಜದ ಮುಖಂಡರು ಒಗ್ಗಟ್ಟಾಗಿ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಹೋರಾಟದ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಮುಂದಾಗಲಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್‌ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.



Related posts

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ

Mumbai News Desk

ಮಾಡೂರು ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಕುಮಾರ್ ಎನ್. ಬಂಗೇರ ಆಯ್ಕೆ

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk