29 C
Mumbai
August 16, 2026
Mumbai News Kannada
ಸುದ್ದಿ

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದ ಡಾ. ಶ್ರೀಕಾಂತ್ ಶಿಂಧೆ ಭೇಟಿ: ದೇವಿಯ ದರ್ಶನ ಪಡೆದು ವಿಶೇಷ ಪೂಜೆ






​ಕಾಪು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ, ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಶ್ರೀಕಾಂತ್ ಶಿಂಧೆ ಅವರು ಗುರುವಾರ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
​ದೇವಸ್ಥಾನಕ್ಕೆ ಆಗಮಿಸಿದ ಸಂಸದರು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಸಂಸದರಿಗೆ ಅಮ್ಮನವರ ಅನುಗ್ರಹ ಪ್ರಸಾದ ನೀಡಿ ಆಶೀರ್ವದಿಸಿದರು.


​ಇದೇ ವೇಳೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸಂಸದ ಡಾ. ಶ್ರೀಕಾಂತ್ ಶಿಂಧೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
​ಈ ಸಂದರ್ಭದಲ್ಲಿ ಡೊಂಬಿವಲಿಯ ಉದ್ಯಮಿ ಗಳಾದ ಭಾಸ್ಕರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಅಜಿತ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.



Related posts

ಕೊಂಕಣ ರೈಲ್ವೆ ಸಂಪೂರ್ಣ ವಿಲೀನಕ್ಕೆ ಕೇಂದ್ರದ ಕಸರತ್ತು: ರಾಜ್ಯಗಳ ಹೂಡಿಕೆ ಗೊಂದಲದ ನಡುವೆ ಅಭಿವೃದ್ಧಿಗೆ ಹೊಸ ಹೆಜ್ಜೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk