ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ, ಪಡುತೋನ್ಸೆ-ಹೂಡೆ ಇವರ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜುಲೈ 5ರ, ಆದಿತ್ಯವಾರ ಮಧ್ಯಾಹ್ನ 3.30 ಕ್ಕೆ “ಶ್ರೀ ಜಗನ್ನಾಥ ಕ್ಷೇತ್ರ ಮಹಿಮೆ” ಎಂಬ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ‘ತುಳುವೆರೆ ತುಳು ಚಾವಡಿ’ ಸಂಸ್ಥೆಯ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೈವೀಕ ಪ್ರವಚನ ಮತ್ತು ಮಧುರ ಸಂಕೀರ್ತನೆಗಳು ನೆರವೇರಲಿದ್ದು, ಆಗಮಿಸುವ ಸರ್ವ ಭಕ್ತಾದಿಗಳಿಗೆ ಸಂಜೆಯ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹೂಡೆಯ ಶ್ರೀ ದೇವಿ ಮಹಿಳಾ ಘಟಕ, ಹಾಗೂ ಶ್ರೀ ಗಜಾನನ ಫ್ರೆಂಡ್ಸ್ ಕ್ಲಬ್ ಮತ್ತು ಟೀಂ ಬಿರುವೇರ್ ಹೂಡೆ ಯುವ ಘಟಕದ ಸದಸ್ಯರು ಸಕ್ರಿಯವಾಗಿ ಕೈಜೋಡಿಸಿದ್ದಾರೆ. ಈ ಭಕ್ತಿಪೂರ್ವಕ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಹಾಗೂ ಭಕ್ತಾದಿಗಳು ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷ ರತನ್ ಡಿ. ಸುವರ್ಣ, ಕಾರ್ಯದರ್ಶಿ ಸತೀಶ್ ಬಿ. ಅಂಚನ್ ಹಾಗೂ ಕೋಶಾಧಿಕಾರಿ ನವೀನ್ ಕುಮಾರ್ ಗುಳಿಬೆಟ್ಟು ಅವರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.




