October 10, 2026
Mumbai News Kannada
ಪ್ರಕಟಣೆ

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ




​ಡೊಂಬಿವಲಿ: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ಶೈಕ್ಷಣಿಕ ಕಾರ್ಯಕ್ರಮದ ಅಂಗವಾಗಿ ಇದೇ ಬರುವ ಜುಲೈ 12ರಂದು ಸಂಜೆ 4 ಗಂಟೆಗೆ ಡೊಂಬಿವಲಿ ಪಶ್ಚಿಮದ ಠಾಕೂರ್ವಾಡಿ ಪರಿಸರದ ‘ವೈಭವ ಮಂಗಳ ಕಾರ್ಯಾಲಯ’ದಲ್ಲಿ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಕನ್ನಡ ಕಲಿಕಾ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ, ಕಲಿಕಾ ತರಗತಿಯ ಶಿಕ್ಷಕಿಯರಿಗೆ ಗೌರವಾರ್ಪಣೆ ಹಾಗೂ ಕಲಿಕಾ ವಿದ್ಯಾರ್ಥಿಗಳಿಂದ ಶಿಕ್ಷಕಿಯರಿಗೆ ಗುರುವಂದನೆ ಕಾರ್ಯಕ್ರಮಗಳು ಜರಗಲಿವೆ.


​ಈ ಶೈಕ್ಷಣಿಕ ಕಾರ್ಯಕ್ರಮದ ಅಂಗವಾಗಿ ಸಭಾ ಕಾರ್ಯಕ್ರಮವೂ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆರ್. ಕೆ. ಸುವರ್ಣ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಶ್ರೀ ಕೃಷ್ಣ ಪಾಟೀಲ್ ಹಾಗೂ ಪರಿಸರದ ನಗರಸೇವಕಿ ಶ್ರೀಮತಿ ರಷಿಕಾ ಕೃಷ್ಣ ಪಾಟೀಲ್ ಅವರು ಆಗಮಿಸಲಿದ್ದಾರೆ. ವೇದಿಕೆಯಲ್ಲಿ ಸಲಹೆಗಾರರಾದ ಇಂದ್ರಾಳಿ ದಿವಾಕರ ಶೆಟ್ಟಿ, ರಾಜೀವ ಭಂಡಾರಿ ಮತ್ತು ವಸಂತ ಸುವರ್ಣ ಅವರು ಉಪಸ್ಥಿತರಿರಲಿದ್ದಾರೆ.


​ಸಂಘದ ರಜತ ಮಹೋತ್ಸವದ ಸರಣಿ ಕಾರ್ಯಕ್ರಮದ ಭಾಗವಾಗಿರುವ ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಉಚಿತ ಪುಸ್ತಕವನ್ನು ಪಡೆಯಲು ಹೆಸರು ನೋಂದಾಯಿಸಿರುವ ಮಕ್ಕಳು, ಪ್ರತಿಭಾ ಪುರಸ್ಕಾರವನ್ನು ಪಡೆಯಲಿರುವ ವಿದ್ಯಾರ್ಥಿಗಳು, ಪಾಲಕರು, ಕನ್ನಡ ಕಲಿಕಾ ತರಗತಿಯ ವಿದ್ಯಾರ್ಥಿಗಳು ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿರಬೇಕಾಗಿ ಸಂಘದ ಉಪಾಧ್ಯಕ್ಷ ಅಶೋಕ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಅಜೆಕಾರು ಜಯ ಶೆಟ್ಟಿ, ಕೋಶಾಧಿಕಾರಿ ಸದಾಶಿವ ಸಾಲಿಯಾನ್, ಜೊತೆ ಕಾರ್ಯದರ್ಶಿ ಶೋಭಾ ಟಿ. ಪೂಜಾರಿ, ಜೊತೆ ಕೋಶಾಧಿಕಾರಿ ಕೆ. ಕೆ. ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಉದಯ ಜೆ. ಶೆಟ್ಟಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ಸಚಿನ್ ಕೋಟ್ಯಾನ್ ಅವರು ವಿನಂತಿಸಿದ್ದಾರೆ.



Related posts

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk