October 17, 2026
Mumbai News Kannada
ತುಳುನಾಡು

ಕಾಪು: ಸಹಕಾರ ತರಬೇತಿ ಕಾರ್ಯಕ್ರಮ ಯಶಸ್ವಿ ಚಾಲನೆ



ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಜಂಟಿ ಸಹಯೋಗದೊಂದಿಗೆ ಇಂದು (15-07-2026ನೇ ಬುಧವಾರ) ಒಂದು ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಲಾಖೆಯ ಅಧಿಕಾರಿಗಳಾದ ಅನುಷಾ ಹಾಗೂ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ,
ಸದಸ್ಯ ಶಿಕ್ಷಣ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾದ ಈ ‘ಕ್ಲಸ್ಟರ್ ಮಾದರಿ ಸಹಕಾರ ತರಬೇತಿ ಕಾರ್ಯಕ್ರಮವು ಕಾಪುವಿನ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಆವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.


ಸಹಕಾರ ಕ್ಷೇತ್ರದ ಬಲವರ್ಧನೆ ಹಾಗೂ ಸದಸ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಹಕಾರಿ ಬಂಧುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದಂತಹ ಎಲ್ಲರನ್ನು ಆದರದಿಂದ ಸ್ವಾಗತಿಸಲಾಯಿತು.


ಅಕ್ಷಯಧಾರ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಅಮಿತಾ ದೇವಾಡಿಗ ಉಪಸ್ಥಿತರಿದ್ದರು.



Related posts

ಭಯ-ಭಕ್ತಿಯ ರೋಮಾಂಚನ: ಕಣ್ಮನ ಸೆಳೆದ ಕಾಪುವಿನ ಇತಿಹಾಸ ಪ್ರಸಿದ್ಧ ಪಿಲಿಕೋಲ

Mumbai News Desk

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk

ಹೆಜಮಾಡಿ ಬೈಪಾಸ್ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹಾಗೂ ಅನಿರ್ದಿಷ್ಟಾವಧಿಯ ಹೋರಾಟ: ವಿನಯ್ ಕುಮಾರ್ ಸೊರಕೆ ಎಚ್ಚರಿಕೆ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk