September 6, 2026
Mumbai News Kannada
ಸುದ್ದಿ

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್





ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ಈ ಸುದೀರ್ಘ ವಿಚಾರಣೆಯನ್ನು ನಡೆಸಿದ್ದು, ತನಿಖಾ ವೈಫಲ್ಯಕ್ಕಾಗಿ ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಘಟನೆ ನಡೆದು ಹದಿನಾಲ್ಕು ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠವು, ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ ಹಾಗೂ ಸಿಐಡಿ ವರದಿಯನ್ನು ಕೇವಲ ಭಾಷಾಂತರ ಮಾಡಲಾಗಿದೆ ಎಂದು ಆಕ್ಷೇಪಿಸಿತು. ಕೆಳ ನ್ಯಾಯಾಲಯದಲ್ಲಿ ಇತರ ಆರೋಪಿಗಳ ವಿರುದ್ಧ ತನಿಖೆ ನಡೆಸುವುದು ಅಗತ್ಯವಿದೆ ಎಂದು ಈ ಹಿಂದೆ ತಿಳಿಸಿದ್ದ ಸಿಬಿಐ, ಈಗ ಸಿಬ್ಬಂದಿ ಮತ್ತು ಹಣಕಾಸಿನ ಕೊರತೆಯ ನೆಪ ಹೇಳುತ್ತಿರುವುದನ್ನು ಕೋರ್ಟ್ ಕಟುವಾಗಿ ವಿಮರ್ಶಿಸಿದೆ.
ಇದರೊಂದಿಗೆ, ಪ್ರಕರಣದ ಸಾಕ್ಷಿಗಳಿಗೆ ನೀಡಲಾಗಿರುವ ಭದ್ರತೆಯನ್ನು ಮುಂದುವರಿಸಲು ನಿರ್ದೇಶನ ನೀಡಿದ ಕೋರ್ಟ್, ಮರು ತನಿಖೆಯ ಸ್ವರೂಪ ಹಾಗೂ ಎಸ್‌ಐಟಿ (SIT) ರಚನೆಯ ಕುರಿತು ತಾನೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಸೌಜನ್ಯ ಅವರ ತಾಯಿ ವಿನಂತಿಸಿದ್ದು, ಎಸ್‌ಐಟಿ ರಚನೆಯಾದರೆ ಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿದೆ. ಮರು ತನಿಖೆಯ ಮುಂದಿನ ಮಾರ್ಗಸೂಚಿ ಮತ್ತು ವಿಸ್ತೃತ ಆದೇಶವನ್ನು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಹೊರಡಿಸಲಿದೆ.



Related posts

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk