30 C
Mumbai
September 11, 2026
Mumbai News Kannada
ಸುದ್ದಿ

ಸ್ಥಳೀಯರ ಹಕ್ಕುಗಳ ರಕ್ಷಣೆಗೆ ಬೃಹತ್ ಪ್ರತಿಭಟನೆ: ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಪೋಸ್ಟರ್ ರಿಲೀಸ್





ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಸ್ಥಳೀಯರ ಹಕ್ಕುಗಳ ರಕ್ಷಣೆಗಾಗಿ ನಡೆಯಲಿರುವ ಬೃಹತ್ ಟೋಲ್ ಹೋರಾಟದ ಅಂಗವಾಗಿ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿ ವತಿಯಿಂದ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಟೋಲ್ ಹೋರಾಟದ ಪೋಸ್ಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸ್ಥಳೀಯ ವಾಹನಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಸ್ಥಳೀಯ ಪಾಸ್ ವ್ಯವಸ್ಥೆ ಜಾರಿ ಹಾಗೂ PWD ರಸ್ತೆಯಲ್ಲಿರುವ ಅನಧಿಕೃತ ಟೋಲ್ ತೆರವುಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಸಿ, ಬೃಹತ್ ಹೋರಾಟವನ್ನು ಯಶಸ್ವಿಗೊಳಿಸಲು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಹೋರಾಟದ ದಿನ ಪ್ರತಿ ಬೂತ್‌ನಿಂದ ಕನಿಷ್ಠ 25 ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ನಿರ್ಧರಿಸಲಾಗಿದ್ದು, ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಎಲ್ಲಾ ಬೂತ್ ಸಮಿತಿಗಳಿಗೆ ಅಗತ್ಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.

ಅಲ್ಲದೆ, ಎಲ್ಲಾ ಧಾರ್ಮಿಕ ಸಂಘಟನೆಗಳು, ಸಮಾಜದ ಮುಖಂಡರು, ಸಂಘ–ಸಂಸ್ಥೆಗಳು, ಯುವ ಸಂಘಟನೆಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಈ ಹೋರಾಟಕ್ಕೆ ಬೆಂಬಲ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.

ಸಭೆಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ಶ್ರೀ ವೈ. ಸುಕುಮಾರ್, ಕೆಪಿಸಿಸಿ ಸಂಯೋಜಕರಾದ ಶ್ರೀ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸುಧೀರ್ ಕರ್ಕೇರ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಬೋಧ್ ಚಂದ್ರ ಹೆಜಮಾಡಿ, ಶ್ರೀ ನವೀನ್ ಎನ್. ಶೆಟ್ಟಿ, ಶ್ರೀ ಅಶೋಕ್ ಸಾಲಿಯಾನ್, ಶ್ರೀ ಹಸನ್ ಬಾವ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಶ್ರೀ ವಿಶಾಲ್ ವಿ. ಬಂಗೇರ, ಹೆಜಮಾಡಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ದೀಕ್ಷಾ ಕೆ., ಪಡುಬಿದ್ರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸುನಂದಾ ಸಾಲಿಯಾನ್, ಪಡುಬಿದ್ರಿ ಎಸ್‌.ಸಿ./ಎಸ್‌.ಟಿ. ಘಟಕದ ಅಧ್ಯಕ್ಷರಾದ ಶ್ರೀ ವಿಠಲ್ ಮಾಸ್ಟರ್, ಅಬ್ದುಲ್ ಮಜೀದ್, ಸುಬ್ಬಯ್ಯ ಮುಲ್ಲ್ಯ, ರಿಫ್ಹಾನ್, ನಾರಾಯಣ್ ಕಲ್ಲಟ್ಟೆ, ಲಿಯಾಖತ್ ಮುನ್ನ, ವಿರೇಶ್ ಮಾಸ್ಟರ್, ಶಕೀಲ್ ಕುಮಾರ್, ಮುಬೀನಾ ಬೇಗಂ, ತಸ್ಲೀನ್ ಆರಾ, ಜ್ಯೋತಿ ಮೆನನ್, ಅಬ್ದುಲ್ ರಜಾಕ್, ಮುಯ್ಯದ್ದೀನ್ ಪಿ.ಕೆ., ಕಿರಣ್ ಪ್ರತಾಪ್, ಉಷಾ ಹಾಗೂ ಹಕೀಮ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ರಮೀಜ್ ಹುಸೇನ್ ಸ್ವಾಗತ ಭಾಷಣ ಮಾಡಿದರು. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಸಂತೋಷ್ ವಂದನಾರ್ಪಣೆ ಸಲ್ಲಿಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆಯಲಿರುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಬೃಹತ್ ಟೋಲ್ ಹೋರಾಟದ ಅಧಿಕೃತ ಪೋಸ್ಟರ್‌ನನ್ನು ಬಿಡುಗಡೆ ಮಾಡಲಾಯಿತು.

ಅವರು ಸ್ಥಳೀಯರ ಹಕ್ಕುಗಳಿಗಾಗಿ ನಡೆಯಲಿರುವ ಈ ಹೋರಾಟಕ್ಕೆ ಎಲ್ಲಾ ಸಂಘ–ಸಂಸ್ಥೆಗಳು, ಧಾರ್ಮಿಕ ಸಂಘಟನೆಗಳು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಕೈಜೋಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.



Related posts

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ತೈಲ ಕಂಪನಿಗಳಿಗೆ ಸುಂಕ ಕಡಿತದ ಸಮಾಧಾನ: ಇಂಧನ ಬಿಕ್ಕಟ್ಟು ಹಾಗೂ ಲಾಕ್‌ಡೌನ್ ವದಂತಿ ತಳ್ಳಿಹಾಕಿದ ಕೇಂದ್ರ

Mumbai News Desk

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ

Mumbai News Desk