July 30, 2026
Mumbai News Kannada
ಮುಂಬಯಿ

ಕಲ್ವಾ: ಬಿಲ್ಲವರ ಅಸೋಸಿಯೇಷನ್ ಸ್ಥಳೀಯ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಗುರು ಪೂರ್ಣಿಮೆ








​ಕಲ್ವಾ (ಮುಂಬೈ):
ಇಲ್ಲಿನ ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಕಲ್ವಾ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ‘ಗುರು ಪೂಜೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


​ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯ ಮತ್ತು ತತ್ವಾದರ್ಶಗಳೊಂದಿಗೆ ನಡೆದ ಈ ಧಾರ್ಮಿಕ ವಿಧಿವಿಧಾನಗಳಲ್ಲಿ ಅಪಾರ ಸಂಖ್ಯೆಯ ಸಮಾಜ ಬಾಂಧವರು ಪಾಲ್ಗೊಂಡು ಗುರುವಂದನೆ ಸಲ್ಲಿಸಿದರು.


​ಕಾರ್ಯಕ್ರಮದಲ್ಲಿ ಬಿಲ್ಲವರ ಅಸೋಸಿಯೇಷನ್ ಮುಂಬೈ ಕೇಂದ್ರ ಕಚೇರಿಯ ಕೋಶಾಧಿಕಾರಿ ರವಿ ಎಸ್. ಸನಿಲ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಹರೀಶ್ ಸಾಲ್ಯಾನ್ ಬಜಗೋಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು.


​ಈ ಶುಭ ಸಮಾರಂಭದಲ್ಲಿ ಸ್ಥಳೀಯ ಕಾರ್ಯಕಾರಿ ಸಮಿತಿಯ ಸಮಸ್ತ ಸದಸ್ಯರು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಕಲ್ವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಪಾರ ಸಂಖ್ಯೆಯ ಸಮಾಜ ಬಾಂಧವರು ಮುಂಜಾನೆಯಿಂದಲೇ ಆಗಮಿಸಿ, ಗುರು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸುವ ಮೂಲಕ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು.
​ಸಂಘಟನೆಯ ಒಗ್ಗಟ್ಟು ಮತ್ತು ಗುರುಗಳ ಮೇಲಿರುವ ಭಕ್ತಿ-ಶ್ರದ್ಧೆಗೆ ಈ ಬಾರಿಯ ಗುರು ಪೂರ್ಣಿಮೆ ಆಚರಣೆಯು ಸಾಕ್ಷಿಯಾಯಿತು.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವ ಸಮಾರೋಪ ಸಮಾರಂಭ

Mumbai News Desk

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳಿಂದ ಗೊರೇಗಾಂವ್‌ನಲ್ಲಿ ನವರಾತ್ರಿ ನೃತ್ಯೋತ್ಸವ – 2025*

Mumbai News Desk