ಮುಂಬಯಿ, ಆ.2:ಮುಂಬಯಿಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ಸಮಾಜದ 8ನೇ ತರಗತಿಯಿಂದ 10ನೇ ತರಗತಿ ಹಾಗೂ 12ನೇ ತರಗತಿಯಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ವಿವಿಧ ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮತ್ತು ಭಾಷಣ ಸ್ಪರ್ಧೆ, ಗಾಯನ ಸ್ಪರ್ಧೆಗಳು ಹಾಗೂಸಂಘದ ಕಾಂಚನಿ ಕಲಾ ಕೇಂದ್ರ ಹಾಗೂ ವಾಗ್ವಾರ್ಧಿನಿ ಸಭೆಯ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಗಸ್ಟ್ 22,ರ ಸಂಜೆ 4 ಕ್ಕೆ ಮಾಟುಂಗಾ ಪೂರ್ವದ ಮೈಸೂರು ಅಸೋಸಿಯೇಶನ್ ಸಭಾಂಗಣದಲ್ಲಿ ನಡೆಯಲಿವೆ. ವಿದ್ಯಾರ್ಥಿ ವೇತನಕ್ಕೆ ಸಮಾಜದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯ ಬೇಕಾಗಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ಆಹ್ವಾನಿಸಲಾಗಿದೆ.
ಸಮಾಜದ ಎಲ್ಲಾ ಬಂಧು-ಬಾಂಧವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಅಧ್ಯಕ್ಷರಾದ ಸಂತೋಷ್ ಕೆ. ಪುತ್ರನ್, ಗೌರವ ಪ್ರಧಾನ ಕಾರ್ಯದರ್ಶಿ ಗಣೇಶ್ ಮೆಂಡನ್, ಗೌರವ ಕೋಶಾಧಿಕಾರಿ ನಾಗರಾಜ್ ಶ್ರೀಯಾನ್, ಕಾಂಚನಿ ಕಲಾ ಕೇಂದ್ರದ ಕಾರ್ಯದರ್ಶಿ ಭಾಸ್ಕರ್ ಶ್ರೀಯಾನ್ ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರದ ಕುರಿತು ಹೆಚ್ಚಿನ ಮಾಹಿತಿಗಾಗಿ ಕೃಷ್ಣ ಮೂರ್ತಿ ನಾಯ್ಕ್ (9867508847)
, ನಾಗರಾಜ್ ಶ್ರೀಯಾನ್ 9892625305), ಸಂತೋಷ್ ಪುತ್ರನ್
(9930023998) ಮತ್ತುರಘುರಾಮ ಚಂದನ್(9820135067) ಅವರನ್ನು ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮ ದ ಹೆಚ್ಚಿನ ಮಾಹಿತಿಗಾಗಿ
ಭಾಸ್ಕರ್ ಶ್ರೀ ಯಾನ್( 9773464509),
ರಾಘವೇಂದ್ರ ಬಗ್ವಾಡಿ (9867636709) , ರಾಧಾ ಮೆಂಡನ್ (9867101910) ಮತ್ತು ವಸಂತಿ ಕುಂದರ್ (9820426250) ಅವರನ್ನು ಸಂಪರ್ಕಿಸಬಹುದು.




