ವಿಶ್ವ :
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಗಲ್ಫ್ ರಾಷ್ಟ್ರಗಳ ಮನವಿಯ ಮೇರೆಗೆ ದಾಳಿಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್ ಮತ್ತೆ ದಾಳಿ ನಡೆದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಎಚ್ಚರಿಸಿದೆ.
ಇಂಡೋನೇಷ್ಯಾದಲ್ಲಿ 271 ಪ್ರಯಾಣಿಕರಿದ್ದ ಫೆರ್ರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಕನಿಷ್ಠ ಐವರು ಮೃತಪಟ್ಟಿದ್ದು, ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಸ್ಪೇನ್ನಲ್ಲಿ ನಿರಾಶ್ರಿತರ ಬಿಕ್ಕಟ್ಟು ತೀವ್ರಗೊಂಡಿದ್ದು, ಸಾವಿರಾರು ಜನರು ಸಮುದ್ರ ಮಾರ್ಗವಾಗಿ ಯುರೋಪ್ ತಲುಪಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸ್ಪೇನ್ನೊಂದಿಗಿನ ಮುಕ್ತ ಗಡಿ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.
ಅಮೆರಿಕದ ಸುಂಕದ ಬೆದರಿಕೆಗಳ ನಡುವೆಯೂ ಭಾರತವು ರಷ್ಯಾದಿಂದ ದಾಖಲೆ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಿದೆ.
ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ನಡೆಯಲ್ಲಿ ನಡೆದ ಭೀಕರ ಆತ್ಮಹುತಿ ಬಾಂಬ್ ದಾಳಿಯಲ್ಲಿ 19ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 55ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದೇಶ :
ಕೇಂದ್ರ ಹಣಕಾಸು ಸಚಿವಾಲಯವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಪರಿಷ್ಕರಿಸಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ.
ಅರುಣಾಚಲ ಪ್ರದೇಶದ ಪ್ರಾಕೃತಿಕ ಸೌಂದರ್ಯದ ಪ್ರಮುಖ ಜಲಮೂಲವಾದ ಗ್ಲಾವ್ ಸರೋವರವನ್ನು (Glaw Lake) ಭಾರತದ 101 ನೇ ರಾಮ್ಸಾರ್ ತಾಣವನ್ನಾಗಿ ಕೇಂದ್ರ ಪರಿಸರ ಸಚಿವಾಲಯ ಘೋಷಿಸಿದೆ.
ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37ಕ್ಕೆ ಹೆಚ್ಚಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಪಾವತಿ ವಿಳಂಬ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮತ್ತು ವಿವಾದ ಬಗೆಹರಿಸುವ ಹೊಸ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಕಿತ ದೊರೆತಿದೆ.
ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದ್ದು, ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ಮೇಲಿನ ಕ್ರಿಮಿನಲ್ ರಹಿತ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದೆ.
ದೇಶದಾದ್ಯಂತ ರಸ್ತೆ ಅಪಘಾತಗಳ ತುರ್ತು ಸಂದರ್ಭದಲ್ಲಿ ಶೀಘ್ರ ವೈದ್ಯಕೀಯ ನೆರವು ನೀಡಲು ಎರಡು ಚಕ್ರಗಳ ಆಂಬುಲೆನ್ಸ್ (Two-wheeler ambulances) ಸೇವೆ ಆರಂಭಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಹೊಸ ಕರಡು ನಿಯಮ ಪ್ರಸ್ತಾಪಿಸಿದೆ.
ಕೇಂದ್ರ ಸರ್ಕಾರದ ಡಿಜಿಟಲ್ ಅಂಗಾಂಗ ದಾನ ವ್ಯವಸ್ಥೆಯಡಿ ಆಧಾರ್ ಆಧಾರಿತ ಡಿಜಿಟಲ್ ಪ್ರತಿಜ್ಞೆ ಸ್ವೀಕರಿಸಿದವರ ಸಂಖ್ಯೆ 5 ಲಕ್ಷ ಗಡಿ ದಾಟಿದ್ದು, ಅಂಗಾಂಗ ಕಸಿ ವಿಷಯದಲ್ಲಿ ಭಾರತ ಜಾಗತಿಕವಾಗಿ 3 ನೇ ಸ್ಥಾನಕ್ಕೆ ಏರಿದೆ.
ಕರ್ನಾಟಕ/ ಬೆಂಗಳೂರು :
ಸಚಿವ ಸಂಪುಟ ವಿಸ್ತರಣೆ ಮತ್ತು ಅಸಮಾಧಾನ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಡೆದು ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 20 ನೂತನ ಶಾಸಕರಿಗೆ ಸಚಿವ ಸ್ಥಾನ ಒಲಿದಿದೆ. ಆದರೆ, ಮಂತ್ರಿಗಿರಿ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರು ಮತ್ತು ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದ್ದು, ರಾಜೀನಾಮೆ ಬೆದರಿಕೆಗಳು ಹಾಗೂ ಪ್ರತಿಭಟನೆಗಳು ವ್ಯಕ್ತವಾಗಿವೆ.
ಬೆಂಗಳೂರು ನಗರದ ವ್ಯಾಪ್ತಿ ಮತ್ತು ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತಾಲಯವನ್ನು ಐದು ಭಾಗಗಳಾಗಿ ವಿಭಜಿಸಿ, ಐವರು ಕಮಿಷನರ್ಗಳನ್ನು ನೇಮಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಇದಲ್ಲದೆ ಪೊಲೀಸ್ ಇಲಾಖೆಯಲ್ಲಿ 6,633 ಹೊಸ ಹುದ್ದೆಗಳ ಸೃಷ್ಟಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬೆಂಗಳೂರಿನ ವೈಟ್ ಟಾಪಿಂಗ್ ರಸ್ತೆಯಲ್ಲಿ ಅಗ್ನಿಶಾಮಕ ದಳದ ತುರ್ತು ಬಳಕೆಗಾಗಿ ಪ್ರಥಮ ಬಾರಿಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆಯನ್ನು ಕೃಷ್ಣ ಬೈರೇಗೌಡ ಉದ್ಘಾಟಿಸಿದ್ದಾರೆ.
ನಮ್ಮ ಮೆಟ್ರೋದ ಹೆಬ್ಬಾಳ ಮತ್ತು ಸರ್ಜಾಪುರ ನಡುವಿನ ಕೆಂಪು ಮಾರ್ಗದಲ್ಲಿ 8 ಇಂಟರ್ಚೇಂಜ್ ನಿಲ್ದಾಣಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಉಪನಗರ ರೈಲು ಯೋಜನೆಯ ಭಾಗವಾಗಿ ಹುಸ್ಕೂರು ಸ್ಟೇಷನ್ ಬಳಿ ಮೊದಲ ‘ಟಿ-ಗಿರ್ಡರ್’ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.
ನಗರದ ನಿವೇಶನದಾರರಿಗೆ ಎಚ್ಚರಿಕೆ ನೀಡಿರುವ ಸರ್ಕಾರ, ಬಿಡಿಎ ಅಥವಾ ಜಿಬಿಎಯಿಂದ ನಿವೇಶನ ಪಡೆದು 5 ವರ್ಷಗಳ ಕಾಲ ಮನೆ ಕಟ್ಟದೆ ಖಾಲಿ ಬಿಟ್ಟರೆ ಅಂತಹ ಸೈಟ್ಗಳನ್ನು ವಾಪಸ್ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದೆ. ಇನ್ನೊಂದೆಡೆ, ಆಗಸ್ಟ್ 15ರಿಂದ ‘ಬೆಂಗಳೂರು ಹಸಿರೂರು’ ಅಭಿಯಾನಕ್ಕೆ ಚಾಲನೆ ಸಿಗಲಿದ್ದು, ನಗರದಾದ್ಯಂತ 1.04 ಲಕ್ಷ ಸಸಿಗಳನ್ನು ನೆಡಲು ಜಿಬಿಎ ವತಿಯಿಂದ ಉಚಿತ ಸಸಿ ವಿತರಣೆ ಸಿದ್ಧತೆಗಳು ನಡೆದಿವೆ.
ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಬೆಂಗಳೂರಿನಲ್ಲಿ ಎಸ್ಐಆರ್ ಅರ್ಜಿ ಭರ್ತಿ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 3.49 ಲಕ್ಷ ರೂಪಾಯಿ ಆನ್ಲೈನ್ ವಂಚನೆ ಎಸಗಿರುವುದು ವರದಿಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಿಗೆ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ಮುಂಬೈ :
ನವಿ ಮುಂಬೈ ಭಾಗಗಳಲ್ಲಿ ಮುಂಗಾರು ಮಳೆಯಿಂದಾಗಿ ದಿನನಿತ್ಯದ ಸಾರಿಗೆ ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಮಸ್ಯೆ ಎದುರಾಗಿದೆ.
ಶಿವಸೇನೆ, ಎನ್ಸಿಪಿ ಮತ್ತು ಬಿಜೆಪಿ ನಾಯಕರ ನಡುವೆ ಸಭೆಗಳು ಹಾಗೂ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.
ಮುಂಬೈ ಉಪನಗರ ರೈಲ್ವೇ ಸೇವೆಗಳು (ಲೋಕಲ್ ಟ್ರೈನ್) ಹಾಗೂ ಸೆಂಟ್ರಲ್ ಲೈನ್ ಮತ್ತು ವೆಸ್ಟರ್ನ್ ಲೈನ್ಗಳಲ್ಲಿ ತಾಂತ್ರಿಕ ಕಾರಣ ಮತ್ತು ಮಳೆಯಿಂದಾಗಿ ರೈಲುಗಳು ಕೊಂಚ ವಿಳಂಬವಾಗಿ ಸಂಚರಿಸುತ್ತಿವೆ.
ಥಾಣೆ ಮತ್ತು ಭಿವಂಡಿ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತವು ರಸ್ತೆ ರಿಪೇರಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಚುರುಕುಗೊಳಿಸಿದೆ, ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೋಲಿಸರು ಬಿಗಿ ಭದ್ರತೆ ವಹಿಸಿದ್ದಾರೆ.
ಉಡುಪಿ :
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ಕರಾವಳಿ ಭಾಗಕ್ಕೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಅಪಾಯಕಾರಿ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜನರು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚಿಸಿದೆ.
ನಿರಂತರ ಮಳೆ ಹಾಗೂ ನೆರೆ ಭೀತಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕಂಟ್ರೋಲ್ ರೂಂಗಳನ್ನು ಸಜ್ಜಾಗಿರಿಸಿದ್ದು, ನದಿ ಹಾಗೂ ಕಡಲತೀರಗಳಿಗೆ ತೆರಳದಂತೆ ಸೂಚನೆ ನೀಡಿದೆ.
ಆಳಸಮುದ್ರ ಮೀನುಗಾರಿಕೆ ಆರಎರಡು ತಿಂಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡಿದ್ದು, ಮಲ್ಪೆ ಹಾಗೂ ಗಂಗೊಳ್ಳಿ ಬಂದರುಗಳಿಂದ ನೂರಾರು ಬೋಟ್ಗಳು ಆಳಸಮುದ್ರ ಮೀನುಗಾರಿಕೆಗೆ ಕಡಲಿಗೆ ಇಳಿದಿವೆ.
ಕುಂದಾಪುರದಲ್ಲಿ ನಡೆದಿದ್ದ ರಿಚರ್ಡ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಕಾರ್ಕಳ ಪೊಲೀಸ್ ಅಧಿಕಾರಿಗಳ ಅಮಾನತು: ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕಾರ್ಕಳ ಡಿವೈಎಸ್ಪಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.
ದಕ್ಷಿಣ ಕನ್ನಡ :
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಘಾಟ್ ಭಾಗದ ರೈಲು ಹಳಿಯ ಮೇಲೆ ಭಾರಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು ಮತ್ತು ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಬಂಟ್ವಾಳ ಭಾಗದಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 8.4 ಮೀಟರ್ಗೆ ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಕಾಡಾನೆ ದಾಳಿ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ ಆನ್ಲೈನ್ನಲ್ಲಿ ಹೆಚ್ಚಿನ ಲಾಭದ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ 16.20 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಋತುಮಾನದ ವೈರಲ್ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಸೂಕ್ತ ಆರೋಗ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರಿನ ದಂಬೇಲ್ ಮತ್ತು ಬಂಗ್ರಕೂಳೂರು ಸಂಪರ್ಕಿಸುವ ಹೊಸ ಸೇತುವೆ ನಿರ್ಮಾಣಕ್ಕಾಗಿ ಸ್ಥಳೀಯ ನಾಗರಿಕರು ಸುಧೀರ್ಘ ಬೇಡಿಕೆ ಮುಂದುವರಿಸಿದ್ದಾರೆ.




