August 4, 2026
Mumbai News Kannada
ಕರ್ನಾಟಕ

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ರಾಜ್ಯ ಸರ್ಕಾರದ ಗಮನಕ್ಕೆ





ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗದಿಂದ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ

ಬೆಂಗಳೂರು, ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, ಹೆಜಮಾಡಿ ಮತ್ತು ಪಡುಬಿದ್ರಿ ಭಾಗದ ಸಾರ್ವಜನಿಕರು ಟೋಲ್ ಸಂಗ್ರಹಣೆಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಜನಸ್ನೇಹಿ ವ್ಯವಸ್ಥೆ ಹಾಗೂ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕೆಪಿಸಿಸಿ ಕೋಆರ್ಡಿನೇಟರ್‌ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಹಾಗೂ ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.

ನಿಯೋಗವು ಹೆಜಮಾಡಿ–ಪಡುಬಿದ್ರಿ ಭಾಗದ ಜನರ ನ್ಯಾಯಸಮ್ಮತ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿತು. ಸಚಿವರು ಮನವಿಯನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಿರಂತರವಾಗಿದ್ದು, ನ್ಯಾಯ ದೊರೆಯುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.



Related posts

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ

Mumbai News Desk

ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖಿಕ ಸಚಿವ ಇನ್ನಿಲ್ಲ

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ

Mumbai News Desk